ವೀಡಿಯೊ…| ಪ್ಲಾಟ್‌ಫಾರ್ಮ್ ಒಳಗೆ ನುಗ್ಗಿದ ಬಸ್‌ ; ನಿಲ್ದಾಣದಲ್ಲಿದ್ದ ಮೂವರು ಪ್ರಯಾಣಿಕರು ಸಾವು, ಅನೇಕರಿಗೆ ಗಾಯ

ವಿಜಯವಾಡ: ಸೋಮವಾರ (ನವೆಂಬರ್ 6) ವಿಜಯವಾಡ ಬಸ್ ನಿಲ್ದಾಣದಲ್ಲಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ ಜನರಿಗೆ ಡಿಕ್ಕು ಹೊಡೆದು ಬೀಳಿಸುತ್ತಿರುವ ಆಘಾತಕಾರಿ ಘಟನೆಯ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಕುಳಿತಿದ್ದ 24 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಈ ಭಯಾನಕ ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ.
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳ ಪ್ರಕಾರ, ಒಂದು ಸ್ಥಳದಲ್ಲಿ ನಿಲ್ಲಿಸಿದ APSRTC ಎಸಿ ಮೆಟ್ರೋ ಐಷಾರಾಮಿ ಬಸ್, ನಿಧಾನವಾಗಿ ಮುಂದಕ್ಕೆ ಚಲಿಸಿತು ಮತ್ತು ಪ್ಲಾಟ್‌ಫಾರ್ಮ್‌ ಒಳಕ್ಕೆ ಜನರು ನಿಂತಿದ್ದ ಪ್ರದೇಶಕ್ಕೆ ನುಗ್ಗಿತು, ರೇಲಿಂಗ್ ಅನ್ನು ಮುರಿದು ಜನರನ್ನು ಎಳೆದೊಯ್ದತು. ಪಂಡಿತ್ ನೆಹರೂ ಬಸ್ ನಿಲ್ದಾಣದ ಪ್ಲಾಟ್ ಫಾರಂ ನಂಬರ್ 12ರಲ್ಲಿ ನಡೆದ ಈ ಘಟನೆಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೂ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ 18 ತಿಂಗಳ ಬಾಲಕಿ ನಂತರ ಇಲ್ಲಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

“ವಾಹನವನ್ನು ಹಿಂದಕ್ಕೆ ತೆಗೆದುಕೊಳ್ಳಲು ರಿವರ್ಸ್‌ ಗೇರ್‌ ಬದಲಿಗೆ ಚಾಲಕನು ಪ್ಲಾಟ್‌ಫಾರ್ಮ್ ಅನ್ನು ಓವರ್‌ಶೂಟ್ ಮಾಡುವ ಮೂಲಕ ಬಸ್‌ ಅನ್ನು ಮುಂದಕ್ಕೆ ಚಲಾಯಿಸಿದ್ದಾನೆ ಎಂದು ಪ್ರಾದೇಶಿಕ ವ್ಯವಸ್ಥಾಪಕ ಎಂ ಯೇಸು ದಾನಮ್ ತಿಳಿಸಿದ್ದಾರೆ. ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಸಿಎಂಒ ಪ್ರಕಟಣೆ ತಿಳಿಸಿದೆ. ಪ್ರಯಾಣಿಕರು ತಮ್ಮನ್ನು ರಕ್ಷಿಸಿಕೊಳ್ಳಲು ಎಲ್ಲೆಂದರಲ್ಲಿ ಓಡುತ್ತಿರುವ ದೃಶ್ಯ ಕಂಡುಬಂದಿದೆ.
APSRTC ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿತು. ತನಿಖೆಗೆ ಆದೇಶಿಸಲಾಗಿದ್ದು, 24 ಗಂಟೆಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಪಿಎಸ್‌ಆರ್‌ಟಿಸಿ ವಿಸಿ ಮತ್ತು ಎಂಡಿ ಸಿಎಚ್ ದ್ವಾರಕಾ ತಿರುಮಲ ರಾವ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

ಏತನ್ಮಧ್ಯೆ, ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆರ್‌ಟಿಸಿ ಬಸ್ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ ಮತ್ತು ಮೃತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಜನ್ಮೋಹನ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಅಪಘಾತದ ಬಗ್ಗೆ ತನಿಖೆಗೂ ಆದೇಶಿಸಿದ್ದಾರೆ.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement