ಹೈಕಮಾಂಡ್‌ ಬುಲಾವ್‌: ಡಿಸಿಎಂ ಡಿಕೆ ಶಿವಕುಮಾರ ದಿಢೀರ್‌ ದೆಹಲಿಗೆ

ಬೆಂಗಳೂರು : ಕಾಂಗ್ರೆಸ್‌ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರು ಇಂದು ಮಂಗಳವಾರ ದೆಹಲಿಗೆ ಹೊರಟಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಕುರ್ಚಿ ಬಗ್ಗೆ ರಾಜ್ಯ ಕಾಂಗ್ರೆಸ್‌ ನಲ್ಲಿ ನಡೆಯುತ್ತಿರುವ ಚರ್ಚೆಗಳ ಮಧ್ಯೆ ಅವರಿಗೆ ಪಕ್ಷ ಹೈಕಮಾಂಡ್‌ ಬುಲಾವ್‌ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ದೆಹಲಿಯಲ್ಲಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೇವಲ ಡಿ.ಕೆ.ಶಿವಕುಮಾರ ಅವರನ್ನಷ್ಟೇ ಅಲ್ಲ, ಅವರ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ದೆಹಲಿಗೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಹೆಚ್ಚು ಕಡಿಮೆ ನಾಲ್ಕು ತಿಂಗಳಾಗುತ್ತ ಬಂದಿದೆ. ಆದರೆ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ, ಅಧಿಕಾರಕ್ಕಾಗಿನ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ. ಪಕ್ಷದ ಹಲವು ಶಾಸಕರು ತಮ್ಮ ತಮ್ಮ ನಾಯಕರ ಪರವಾಗಿ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಹೈಕಮಾಂಡ್‌ ಶಿಸ್ತುಕ್ರಮದ ಎಚ್ಚರಿಕೆ ನೀಡಿದರೂ ಯಾರೂ ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ ದೆಹಲಿಗೆ ಹೈಕಮಾಂಡ್‌ ಭೇಟಿಗೆ ಶಿವಕುಮಾರ ಹೋಗುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಡಿಕೆಶಿ-ಸತೀಶ್ ಜಾರಕಿಹೊಳಿ ಭೇಟಿ…
ಬೆಳಗಾವಿ ವಿದ್ಯಮಾನದಿಂದಾಗಿ ಮುನಿಸಿಕೊಂಡಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಡಿ ಕೆ ಶಿವಕುಮಾರ ಇಂದು ಮಂಗಳವಾರ ಬೆಳಿಗ್ಗೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮೊನ್ನೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದ ಬ್ರೇಕ್ ಫಾಸ್ಟ್ ಸಭೆಗೆ ಸತೀಶ್ ಜಾರಕಿಹೊಳಿ ಗೈರಾಗಿದ್ದರು.ಅಲ್ಲದೆ, 2028ಕ್ಕೆ ನಾನು ಕೂಡ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುತ್ತೇನೆ ಎಂದು ಸೋಮವಾರ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದು ಸಹ ಪಕ್ಷದ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಕುಕಾರ ಹಾಗೂ ಸತೀಶ ಜಾರಕಿಹೊಳಿ ಭೇಟಿ ಮಹತ್ವ ಪಡೆದಿದೆ.
ಡಿ.ಕೆ. ಶಿವಕುಮಾರ ಭೇಟಿ ಬಗ್ಗೆ ಸತೀಶ ಜಾರಕಿಹೊಳಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದು, ಶಿವಕುಮಾರ ಅವರು ರಾಜಕೀಯ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಸಂಘಟನೆ, ಲೋಕಸಭಾ ಚುನಾವಣೆ, ಜಿಲ್ಲಾಧ್ಯಕ್ಷರ ಬದಲಾವಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement