ಬೆಂಗಳೂರಿನ 15 ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್‌ಐಎ ದಾಳಿ

ನವದೆಹಲಿ/ಬೆಂಗಳೂರು: ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ(NIA) ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳ ವಿವಿಧ ಕಡೆಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.
ಕರ್ನಾಟಕ, ತಮಿಳುನಾಡು, ತೆಲಂಗಾಣ, ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ಹರಿಯಾಣ, ಪುದುಚೇರಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಶೋಧ ನಡೆಸಿದೆ.
ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಇಂದು, ಬುಧವಾರ ಬೆಳಿಗ್ಗೆ ಎನ್ ಐಎ ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.
8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ 15 ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಿದೆ.
ಈಗ ವಶಕ್ಕೆ ಪಡೆಯಲಾಗಿರುವ ವಲಸಿಗರು ಮೇಲೆ ಮಾನವ ಕಳ್ಳಸಾಗಾಣಿಕೆ ಮತ್ತು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದದೆ. ಈ ಸಂಬಂಧ ಎನ್‌ಐಎ ವಿಶೇಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆಧಾರದ ಮೇಲೆ 15 ತಂಡಗಳಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆಆರ್ ಪುರಂ, ಬೆಳ್ಳಂದೂರು ಸೇರಿದಂತೆ ಹಲವು ಕಡೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement