ಮಂಡ್ಯದ ವಿಸಿ ನಾಲೆಗೆ ಬಿದ್ದ ಕಾರು: ಐವರ ಸಾವು

ಮಂಡ್ಯ : ಜಿಲ್ಲೆಯ ಪಾಂಡವಪುರ ಪಟ್ಟಣ ಹೊರವಲಯದ  ಬನಘಟ್ಟ ಗ್ರಾಮದ ಬಳಿ ಶ್ರೀರಂಗಪಟ್ಟಣ-ಜೇವರ್ಗಿ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಕಾರೊಂದು ವಿಶ್ವೇಶ್ವರಯ್ಯ ನಾಲೆಗೆ ಉರುಳಿ ಬಿದ್ದು ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಮೃತರನ್ನು ತುಮಕೂರು ಜಿಲ್ಲೆಯ  ತಿಪಟೂರು ತಾಲ್ಲೂಕು, ನೊಣವಿನಕೆರೆ ಬಳಿಯ ಕೈದಾಳ ಗ್ರಾಮದ ಚಂದ್ರಪ್ಪ, ಕೃಷ್ಣಪ್ಪ, ಧನಂಜಯ, ಬಾಬು, ಜಯಣ್ಣ ಎಂದು ಗುರುತಿಸಲಾಗಿದೆ.

ಮೃತರೆಲ್ಲ ಸಂಬಂಧಿಗಳಾಗಿದ್ದು ಅದರಲ್ಲಿ ಕೆಲವರು ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ.  ಮೈಸೂರಿನ ಬಿಳಿಕೆರೆಯಲ್ಲಿ ಮಂಗಳವಾರ ನಡೆದ ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ತಿಪಟೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಬಂಧಿಸಿದೆ. ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಕಾರು ನಾಲೆಗೆ ಬಿದ್ದಿದೆ, ಪಾಂಡವಪುರದಿಂದ ನಾಗಮಂಗಲಕ್ಕೆ ಹೋಗುವ ವೇಳೆ ರಸ್ತೆ ತಿರುವಿನಲ್ಲಿ ವೇಗವಾಗಿ ಬಂದು ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ.   ತುಂಬಿ ಹರಿಯುತ್ತಿದ್ದ ಕಾಲುವೆ ನೀರಿನಲ್ಲಿ ಕಾರು ಸಂಪೂರ್ಣವಾಗಿ ಮುಳುಗಿತ್ತು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರು ಹುಡುಕಲು ಅರ್ಧಗಂಟೆಗೂ ಹೆಚ್ಚು ಕಾಲ ಹಿಡಿಯಿತು.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಎಚ್‌.ಡಿ. ರೇವಣ್ಣಗೆ ಜಾಮೀನು ಮಂಜೂರು

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement