ರಾಜ್ಯದ 13 ಜಿಲ್ಲೆಗಳಲ್ಲಿ 24 ಗಂಟೆಯೊಳಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ 13 ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಮಂಗಳವಾರ ಸಂಜೆಯಿಂದ ಬುಧವಾರ ಸಂಜೆ ವರೆಗೆ ಹಲವು ಕಡೆ ಮಳೆ…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ 9 ಸೆ. ಮೀ ನಷ್ಟು ಭಾರೀ ಮಳೆ ಆಗಿದೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯಲ್ಲಿ 5 ಸೆ.ಮೀ, ಉತ್ತರ ಕನ್ನಡ ಜಿಲ್ಲೆಯ ಕದ್ರಾ, ಕ್ಯಾಸಲ್‌ ರಾಕ್‌, ಕಲಬುರಗಿ ಜಿಲ್ಲೆಯ ಜೇವರ್ಗಿ ಹಾಗೂ ಗುಂಡಗುರ್ತಿ, ಶಿವಮೊಗ್ಗ ನಗರದಲ್ಲಿ ತಲಾ 4 ಸೆ.ಮೀ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಮಂಗಳೂರು ವಿಮಾನ ನಿಲ್ದಾನ, ಕಲಬುರಗಿ ಜಿಲ್ಲೆಯ ಕಮಲಾಪುರ, ಚಿತ್ತಾಪುರ, ಬೆಂಗಳೂರು ನಗರ, ಶಿವಮೊಗ್ಗದ ಲಿಂಗನಮಕ್ಕಿ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ತಲಾ 3 ಸೆ.ಮೀ ಮಳೆಯಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ, ಚಿಕ್ಕಮಗಳೂರು ಜಿಲ್ಲೆಯ ಯಗಟಿ, ಅಜ್ಜಂಪುರ, ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ತಲಾ 2 ಸೆ.ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಹಾಗೂ ಸಿದ್ದಾಪುರ, ಮಂಗಳೂರಿನ ಪಣಂಬೂರು, ಬೀದರ್‌ ಜಿಲ್ಲೆಯ ಮುಡಬಿ, ಕಲಬುರಗಿ ಜಿಲ್ಲೆಯ ಅಡಕಿ, ಸೇಡಂ, ಅಫಲಜಪುರ, ಹಾವೇರಿ ಜಿಲ್ಲೆ ಶಿಗ್ಗಾಂವಿ, ವಿಜಯಪುರ ಜಿಲ್ಲೆ ಮುದ್ದೆ ಬಿಹಾಳ ಮೊದಲಾದ ಕಡೆ 1 ಸೆ. ಮೀ ಪ್ರಮಾಣದಲ್ಲಿ ಮಳೆಯಾಗಿದೆ.

ಪ್ರಮುಖ ಸುದ್ದಿ :-   ಗೂಗಲ್ ಟ್ರಾನ್ಸ್‌ಲೇಟ್‌ ನಲ್ಲಿ ತುಳು ಭಾಷೆ ಸೇರ್ಪಡೆ

5 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement