ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕನಿಗೆ ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ

ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಮಾಜಿ ಕಮಾಂಡರ್ ಅಕ್ರಮ್ ಖಾನ್ ಎಂಬಾತನನ್ನು ಪಾಕಿಸ್ತಾನದಲ್ಲಿ ಗುರುವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿವರಗಳ ಪ್ರಕಾರ, ಅಕ್ರಮ್ ಗಾಜಿ ಎಂಬ ಹೆಸರಿನಿಂದಲೂ ಕರೆಯಲ್ಪಡುವ ಅಕ್ರಮ್ ಖಾನ್, ಬಜೌರ್ ಜಿಲ್ಲೆಯಲ್ಲಿ (ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ) ಅಪರಿಚಿತ ದಾಳಿಕೋರರಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟಿದ್ದಾನೆ.
2018 ರಿಂದ 2020ರ ವರೆಗೆ ಎಲ್ಇಟಿ ನೇಮಕಾತಿ ಸೆಲ್ ಅನ್ನು ಮುನ್ನಡೆಸಿದ್ದ ಗಾಜಿ, ಪಾಕಿಸ್ತಾನದಲ್ಲಿ ಭಾರತ ವಿರೋಧಿ ಭಾಷಣಗಳಿಗೆ ಹೆಸರುವಾಸಿಯಾಗಿದ್ದ.ಆತ ಭಯೋತ್ಪಾದಕ ಗುಂಪಿನ ಪ್ರಮುಖ ವ್ಯಕ್ತಿಯಾಗಿದ್ದು, ದೀರ್ಘಕಾಲದವರೆಗೆ ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಆತ ಎಲ್‌ಇಟಿ ನೇಮಕಾತಿ ಕೋಶದ ನೇತೃತ್ವ ವಹಿಸಿದ್ದ, ಇದು ಉಗ್ರಗಾಮಿಗಳ ಪರ ಸಹಾನುಭೂತಿ ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ನೇಮಕ ಮಾಡುವ ಜವಾಬ್ದಾರಿ ಹೊಂದಿರುವ ವಿಭಾಗವಾಗಿದೆ. ಘಾಜಿ ಹತ್ಯೆಯಲ್ಲಿ ವಿವಿಧ ಭಯೋತ್ಪಾದಕ ಗುಂಪುಗಳು ಸೇರಿದಂತೆ ಸ್ಥಳೀಯ ವಿರೋಧಿಗಳ ಪಾತ್ರ ಇರಬಹುದು ಎನ್ನಲಾಗಿದೆ.

ಈ ವರ್ಷದ ಅಕ್ಟೋಬರ್‌ನಲ್ಲಿ ಪಠಾಣ್‌ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್‌ನನ್ನು ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪಾಕಿಸ್ತಾನದ ಗುಜ್ರಾನ್‌ವಾಲಾ ನಗರದಲ್ಲಿದ್ದ ಈತ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ. ಮತ್ತು 2016 ರಲ್ಲಿ ಪಠಾಣ್‌ಕೋಟ್ ಏರ್ ಫೋರ್ಸ್ ಸ್ಟೇಷನ್‌ಗೆ ನುಸುಳಿದ್ದ ನಾಲ್ವರು ಭಯೋತ್ಪಾದಕರ ಹ್ಯಾಂಡ್ಲರ್ ಆಗಿದ್ದ.
ಸೆಪ್ಟೆಂಬರ್‌ನಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾವಲ್‌ಕೋಟ್‌ನಲ್ಲಿರುವ ಅಲ್-ಕುದುಸ್ ಮಸೀದಿಯೊಳಗೆ ಲಷ್ಕರ್-ಎ-ತೈಬಾದ ಉನ್ನತ ಭಯೋತ್ಪಾದಕ ಕಮಾಂಡರ್‌ನನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದರು. ಉಗ್ರನನ್ನು ರಿಯಾಜ್ ಅಹ್ಮದ್ ಅಲಿಯಾಸ್ ಅಬು ಖಾಸಿಂ ಎಂದು ಗುರುತಿಸಲಾಗಿದೆ.
ರಿಯಾಜ್ ಅಹ್ಮದ್ ಪ್ರಾರ್ಥನೆ ಸಲ್ಲಿಸಲು ಬಂದಿದ್ದರು, ಆಗ ಆತನ ತಲೆಗೆ ಪಾಯಿಂಟ್-ಬ್ಲಾಂಕ್ ರೇಂಜ್ನಲ್ಲಿ ಗುಂಡು ಹಾರಿಸಲಾಯಿತು.

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement