ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ

ಬೆಂಗಳೂರು: ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.
ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಕುರಿತಾದ ಚರ್ಚೆಗೆ ತೆರೆ ಬಿಜೆಪಿ ತೆರೆ ಎಳೆದಿದೆ. ವಿಜಯೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ. ಬಿಜೆಪಿಯು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವ ಯುವ ನಾಯಕನನ್ನು ಬಿಜೆಪಿ ಆಯ್ಕೆ ಮಾಡಿದೆ. ಬಿ.ವೈ.ವಿಜಯೇಂದ್ರ ಅವರು ಬಿಜೆಪಿಯ ರಾಜ್ಯ ಉಪಾಧ್ಯಕ್ಷರಾಗಿದ್ದರು.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಹುದ್ದೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಶಾಸಕ ಸಿ.ಟಿ. ರವಿ ಸೇರಿದಂತೆ ಹಲವರ ಹೆಸರು ಚರ್ಚೆಯಲ್ಲಿತ್ತು. ಆದರೆ ಪಕ್ಷ ಅಂತಿಮವಾಗಿ ಇದೀಗ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇದರಿಂದಾಗಿ ಬಿಜೆಪಿ ಹೈಕಮಾಂಡ್ ಮತ್ತೆ ಯಡಿಯೂರಪ್ಪ ಅವರಿಗೆ ಮನ್ನಣೆ ನೀಡಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಚ್ಚರಿಕೆಯ ಆಯ್ಕೆ ಮಾಡಿದೆ. ಹಾಗೂ ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಅವರ ಪ್ರಭಾವ ಬಳಸಿಕೊಳ್ಳಲು ಸಿದ್ಧತೆ ನಡೆಸಿದೆ. ಹಾಗೂ ಮತಗಳ ಲೆಕ್ಕಾಚಾರದ ವಿಚಾರವನ್ನೇ ಗಮನದಲ್ಲಿಟ್ಟು ವಿಜಯೇಂದ್ರ ಅವರಿಗೆ ಪಕ್ಷ ಮಣೆ ಹಾಕಿದೆ.

ಪ್ರಮುಖ ಸುದ್ದಿ :-   ರಾಜ್ಯ ಸರ್ಕಾರದಿಂದ ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಹಸ್ತಾಂತರ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘಟನಾ ಸಾಮರ್ಥ್ಯ ಹಾಗೂ ಪ್ರಭಾವಶಾಲಿ ನಾಯಕರಿಗಾಗಿ ಬಿಜೆಪಿ ಹುಡುಕಾಟ ನಡೆಸಿತ್ತು. ಕೆಲದಿನಗಳ ಹಿಂದೆ ಯುವನಾಯಕ ಬಿ.ವೈ.ವಿಜಯೇಂದ್ರ ಅವರ ಹೆಸರು ಮುನ್ನೆಲೆಗೆ ಬಂದಿತ್ತು. ರಾಜ್ಯಾಧ್ಯಕ್ಷರಾಗಿ ನಳಿನಕುಮಾರ ಕಟೀಲು ಅವರ ಅವಧಿ ಎರಡು ವರ್ಷಗಳ ಹಿಂದೆಯೇ ಪೂರ್ಣಗೊಂಡಿತ್ತು. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಆದೇಶದ ಮೇರೆಗೆ ಈಗ ಅವರ ಬದಲಿಗೆ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿ ಪ್ರಧಾನ ಕಾರ್ಯದರ್ಶಿ ಅರುಣ ಸಿಂಗ್‌ ಆದೇಶ ಹೊರಡಿಸಿದ್ದಾರೆ.

ಬಿ.ವೈ.ವಿಜಯೇಂದ್ರ…
ಪ್ರಭಾವಿ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಿರಿಯ ಪುತ್ರ. ಬಿ.ಎಸ್. ಯಡಿಯೂರಪ್ಪ ಅವರು 1983ರಿಂದ ಪ್ರತಿನಿಧಿಸುತ್ತಿರುವ ಶಿಕಾರಿಪುರ ಕ್ಷೇತ್ರದಲ್ಲಿ ಈ ಸಲ ವಿಧಾನ ಸಭೆ ಚುನಾವಣೆಯಲ್ಲಿ ಗೆದ್ದು ಇದೇ ಮೊದಲಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ವಿಜಯೇಂದ್ರ ಅವರ ಅಣ್ಣ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ.
ಬಿ.ವೈ.ವಿಜಯೇಂದ್ರ ಅವರು ಈ ಹಿಂದೆ ಬಿಜೆವೈಎಂ (ಬಿಜೆಪಿ ಯುವ ಮೋರ್ಚಾ) ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ಕಾನೂನು ಪದವಿ ವ್ಯಾಸಂಗ ಮಾಡಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್‌ ಕಾರ್ಯಕರ್ತರಾಗಿ, ಸಂಘಟನಾತ್ಮಕ ಹೊಣೆಗಾರಿಕೆಗಳನ್ನೂ ನಿಭಾಯಿಸಿದ್ದರು.
2020 ರಲ್ಲಿ ಅವರು ಬಿಜೆಪಿಯ ಕರ್ನಾಟಕ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡರು. ಇತ್ತೀಚಿಗೆ ಮುಗಿದ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ, 25 ಸದಸ್ಯರ ಚುನಾವಣಾ ಪ್ರಚಾರ ಸಮಿತಿಯ ಸದಸ್ಯರೂ ಆಗಿದ್ದರು.

ಪ್ರಮುಖ ಸುದ್ದಿ :-   ವಿಜಯಪುರದಲ್ಲಿ ಮೆಕ್ಕೆಜೋಳ ಸಂಸ್ಕರಣೆ ಘಟಕ ಕುಸಿತ : ಐವರು ಕಾರ್ಮಿಕರ ಶವ ಹೊರಕ್ಕೆ

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement