ಮಂಡ್ಯ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ; ವೀಡಿಯೊ ಮಾಡಿ ಬ್ಲಾಕ್ ಮೇಲ್ : ಮೂವರ ಬಂಧನ

ಮಂಡ್ಯ: ಅಪ್ರಾಪ್ತೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಮದ್ದೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಅಪ್ರಾಪ್ತೆ ತಾಯಿ ನೀಡಿದ ದೂರಿ‌ನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ತಾಲೂಕಿನ ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ನ.4ರಂದು ಸಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಯುವ ದಸರಾದಲ್ಲಿ ಯುವತಿಗೆ ಪರಿಚಯವಾಗಿದ್ದ ಯುವಕ. ನಂತರ ಯುವತಿ ಜೊತೆ ಪ್ರೀತಿ, ಪ್ರೇಮದ ನಾಟಕವಾಡಿ ನವಂಬರ್ 4 ರಂದು ಮದ್ದೂರಿನ ಖಾಸಗಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಬಳಿಕ ಆತನ ಇಬ್ಬರು ಸ್ನೇಹಿತರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಅಷ್ಟೇ ಅಲ್ಲದೆ, ಈ ವೇಳೆ ಲೈಂಗಿಕ ದೌರ್ಜನ್ಯದ ವಿಡಿಯೋ ಚಿತ್ರೀಕರಿಸಿರುವ ಆರೋಪಿಗಳು, ನಂತರ ವೀಡಿಯೊ ಇಟ್ಟುಕೊಂಡು ಯುವತಿಗೆ ಕರೆದಾಗಲೆಲ್ಲ ಬರುವಂತೆ ಬ್ಲಾಕ್ ಮೇಲ್ ಕೂಡ ಮಾಡುತ್ತಿದ್ದರು ಎನ್ನಲಾಗಿದೆ.
ಈ ಆರೋಪಿಗಳ ಬೆದರಿಕೆಗೆ ಹೆದರಿದ್ದ ಅಪ್ರಾಪ್ತೆ ನಂತರ ಘಟನೆ ಕುರಿತಂತೆ ಪೊಷಕರಿಗೆ ತಿಳಿಸಿದ್ದಾಳೆ. ವಿಚಾರ ತಿಳಿಯುತ್ತಿದ್ದಂತೆ ಪೋಷಕರು ತಕ್ಷಣವೇ ಮದ್ದೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿರುವ ಪೊಲೀಸರು ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಸಂತ್ರಸ್ತೆ ಗ್ರಾಮದ ಅಕ್ಕಪಕ್ಕದ ಗ್ರಾಮದವರು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement