ಚೆನ್ನೈ: ಮುಂಜಾನೆ ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ತಮಿಳುನಾಡು ಸರ್ಕಾರಿ ಬಸ್ ಮತ್ತು ಓಮ್ನಿಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸಾವಿಗೀಡಾಗಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್‌ಇಟಿಸಿ ಬಸ್ ಚಾಲಕ ಕೆ.ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25) ಸ್ಥಳದಲ್ಲೇ ಮೃತಪಟ್ಟರೆ, ಓಮ್ನಿಬಸ್ ಚಾಲಕ ಎನ್ ಸೈಯದ್ ನಂತರ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ ಬಸ್ ಡಿಕ್ಕಿ ಹೊಡೆದಿದೆ.
ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹತ್ತು ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ