ಉಡುಪಿ: ಮಲ್ಪೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಸಮೀಪದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ.ಮೃತರಲ್ಲಿ ತಾಯಿ ಮತ್ತು ಮೂವರು ಮಕ್ಕಳು ಸೇರಿದ್ದಾರೆ.
ಮೃತರನ್ನು ತಾಯಿ ಹಸೀನಾ (46), ಅಫ್ನಾನ್ (23), ಅಯ್ನಾಝ್ (21) ಮತ್ತು ಆಸೀಮ್ (12) ಮೃತ ದುರ್ದೈವಿಗಳು. ಮನೆಯೊಳಗಿದ್ದ ಮತ್ತೋರ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಕೃತ್ಯ ನಡೆಸಿದ್ದಾನೆ, ಚೂರಿಯಿಂದ ಚುಚ್ಚಿ ಕೊಲೆಗೈದು ಹಂತಕರು ಪರಾರಿ ಆಗಿದ್ದಾನೆ ಎನ್ನಲಾಗಿದೆ. ಶಂಕಿತ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ.

ಕೊಲೆಗಾರ ಏಕಾಏಕಿ ಮನೆಗೆ ನುಗ್ಗಿದ ನಂತರ ಮಾತಿನ ಚಕಮಕಿ ನಡೆದಿದ್ದು, ಮೊದಲು ಮಹಿಳೆ ಹಾಗೂ ಮಕ್ಕಳಾದ ಅಫ್ನಾನ್, ಅಯ್ನಾಝ್ ಎಂಬವರನ್ನು ಮೊದಲು ಇರಿದಿದ್ದು, ಕೂಗು ಕೇಳಿ ಆಟವಾಡುತ್ತಿದ್ದ ಆಸೀಮ್ ಒಳ ಬರುತ್ತಿದ್ದಂತೆ ದುಷ್ಕರ್ಮಿ ಇರಿದು ಕೊಂದಿದ್ದಾನೆ ಎನ್ನಲಾಗಿದೆ. ಬೊಬ್ಬೆ ಕೇಳಿ ಪಕ್ಕದ ಮನೆ ಯುವತಿ ಹೊರಗಡೆ ಬಂದಿದ್ದು, ಆಕೆಯನ್ನೂ ಬೆದರಿಸಿ ದುಷ್ಕರ್ಮಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಪ್ರಮುಖ ಸುದ್ದಿ :-   ಕರ್ನಾಟಕದ 7 ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಮಳೆ ಅಬ್ಬರ ; ಉಳಿದ ಜಿಲ್ಲೆಗಳಲ್ಲಿ ಚುರುಕು

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ.  ಸ್ಥಳಕ್ಕೆ ಎಸ್​.ಪಿ ಅರುಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement