ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲಿ ವಸಾಹತು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಮತ ಚಲಾಯಿಸಿದ ಭಾರತ

ನವದೆಹಲಿ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ವಸಾಹತುಗಳನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ. “ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಮತ್ತು ಆಕ್ರಮಿತ ಸಿರಿಯನ್ ಗೋಲನ್‌ನಲ್ಲಿ” ವಸಾಹತು ಚಟುವಟಿಕೆಗಳನ್ನು ಖಂಡಿಸುವ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಯಿತು. ಇದನ್ನು ವಿರೋಧಿಸಿದ ಏಳು ದೇಶಗಳಲ್ಲಿ ಅಮೆರಿಕ ಮತ್ತು ಕೆನಡಾ ಸೇರಿವೆ. ಹದಿನೆಂಟು ದೇಶಗಳು ಮತದಾನದಿಂದ ದೂರ ಉಳಿದವು.

ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ “ತಕ್ಷಣದ, ದೀರ್ಘಕಾಲದ ಮತ್ತು ನಿರಂತರ ಮಾನವೀಯ ಒಪ್ಪಂದ” ಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ನಿರ್ಣಯದ ಮೇಲೆ ಭಾರತವು ಮತದಾನದಿಂದ ದೂರ ಉಳಿದ ಕೆಲವೇ ದಿನಗಳ ನಂತರ ಇದು ಬಂದಿದೆ.
ನಿರ್ಣಯದ ಪರವಾಗಿ 145 ಮತಗಳ ಮೂಲಕ, ಸಮಿತಿಯು ” ಪೂರ್ವ ಜೆರುಸಲೆಮ್ ಮತ್ತು ಆಕ್ರಮಿತ ಸಿರಿಯನ್ ಗೋಲನ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನಿಯನ್ ಪ್ರಾಂತ್ಯದಲ್ಲಿ ಇಸ್ರೇಲಿ ವಸಾಹತುಗಳು ಎಂಬ ಕರಡು ನಿರ್ಣಯವನ್ನು ಅನುಮೋದಿಸಿತು ಎಂದು ವಿಶ್ವಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ತನ್ನ ನಿಯಮಗಳ ಪ್ರಕಾರ, ವಿಶ್ವಸಂಸ್ಥೆ ಸಾಮಾನ್ಯ ಸಭೆಯು ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನಿಯನ್ ಪ್ರದೇಶದಲ್ಲಿ ಮತ್ತು ಆಕ್ರಮಿತ ಸಿರಿಯನ್ ಗೋಲನ್ ಭೂಮಿಯನ್ನು ವಶಪಡಿಸಿಕೊಳ್ಳುವುದು, ಸಂರಕ್ಷಿತ ವ್ಯಕ್ತಿಗಳ ಜೀವನೋಪಾಯದ ಅಡ್ಡಿ, ನಾಗರಿಕರ ಬಲವಂತದ ವರ್ಗಾವಣೆಯನ್ನು ಒಳಗೊಂಡಿರುವ ಯಾವುದೇ ಚಟುವಟಿಕೆಗಳು. ಮತ್ತು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು, ವಸ್ತುತಃ ಅಥವಾ ರಾಷ್ಟ್ರೀಯ ಶಾಸನದ ಮೂಲಕ ವಸಾಹತು ಚಟುವಟಿಕೆಗಳನ್ನು ಖಂಡಿಸುತ್ತದೆ ಎಂದು ಅದು ಹೇಳಿದೆ.

ಪ್ರಮುಖ ಸುದ್ದಿ :-   ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲಗೆ ಸುಪ್ರೀಂ ಕೋರ್ಟ್‌ ಜಾಮೀನು

ಇಸ್ರೇಲ್ ಮೇಲೆ ಅಕ್ಟೋಬರ್ 7ರಂದು ಹಮಾಸ್‌ ದಾಳಿಯ ನಂತರ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವು ಗಾಜಾದಲ್ಲಿ 11,000 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಹಮಾಸ್ ದಾಳಿಯಲ್ಲಿ ಸುಮಾರು 1,200 ಇಸ್ರೇಲಿಗಳು ಕೊಲ್ಲಲ್ಪಟ್ಟರು ಮತ್ತು 200 ಕ್ಕೂ ಹೆಚ್ಚು ಜನರನ್ನು ಹಮಾಸ್‌ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದೆ.

 

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement