ಜ.22ರಂದು ರಾಮ ಮಂದಿರ ಉದ್ಘಾಟನೆ : ದೇಶಾದ್ಯಂತ 10 ಕೋಟಿ ಕುಟುಂಬ ಆಹ್ವಾನಿಸಲು ನಿರ್ಧಾರ

ಅಯೋಧ್ಯೆಯ ರಾಮ ಮಂದಿರದಲ್ಲಿ ಭಗವಾನ್ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ಹೇಳಿದೆ.
ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಮಹಾಸಚಿವ ಚಂಪತ್ ರಾಯ್ ಅವರು, ಜನವರಿ 22 ರಂದು ದೇವಾಲಯದಲ್ಲಿ ಶ್ರೀರಾಮನ ಮೂರ್ತಿ ಸ್ಥಾಪಿಸಲಾಗುವುದು ಎಂದು ಖಚಿತಪಡಿಸಿದ್ದಾರೆ. ಮತ್ತು ಪ್ರಧಾನಿ ಮೋದಿ ಅವರಿಗೂ ಈಗಾಗಲೇ ಆಹ್ವಾನವನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

136 ಸನಾತನ ಸಂಪ್ರದಾಯಗಳ 25,000 ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಪವಿತ್ರ ಸಮಾರಂಭಕ್ಕೆ ಆಹ್ವಾನಿಸಲು ಟ್ರಸ್ಟ್ ಯೋಜನೆ ರೂಪಿಸಿಕೊಂಡಿದೆ. ಪಟ್ಟಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವ 25,000 ಸಂತರ ಜೊತೆಗೆ, 10,000 “ವಿಶೇಷ ಅತಿಥಿಗಳು” ಸಹ ಪಾಲ್ಗೊಳ್ಳಲಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಉದ್ಘಾಟನೆಗೂ ಮುನ್ನ ಅಯೋಧ್ಯೆಯನ್ನು ಸುಂದರಗೊಳಿಸಲು ಮತ್ತು ಅತ್ಯಾಧುನಿಕ ನಗರ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನವೆಂಬರ್ 2019 ರಲ್ಲಿ ಸುಪ್ರೀಂ ಕೋರ್ಟ್ನೀಡಿದ ತೀರ್ಪು ರಾಮ ಮಂದಿರ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟಿತು. ನಂತರ ಕೇಂದ್ರವು ನಿರ್ಮಾಣ ಹಂತದಲ್ಲಿ ಮಂದಿರಕ್ಕೆ ಬೇಕಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರವನ್ನು ಸ್ಥಾಪಿಸಿತು. ನಂತರ ಆಗಸ್ಟ್ 5, 2020 ರಂದು ಪ್ರಧಾನಿ ಮೋದಿ ಅವರು ದೇವಾಲಯಕ್ಕೆ ಅಡಿಪಾಯ ಹಾಕಿದ್ದರು. ಈಗ ಅಯೋಧ್ಯೆಯಲ್ಲಿ ದೇವಾಲಯ ಕಾಮಗಾರಿ ಸಾಕಷ್ಟು ಮಟ್ಟದಲ್ಲಿ ಪೂರ್ಣಗೊಂಡಿದ್ದು, ರಾಮನ ಮೂರ್ತಿ ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಗಿರ್‌ ಸೋಮನಾಥದ ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸಿದ 2 ಸಿಂಹಿಣಿಗಳು, 8 ಸಿಂಹದ ಮರಿಗಳ ಗುಂಪು-ವೀಕ್ಷಿಸಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement