ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುತ್ತೇವೆ: ಅಧೀಕಾರ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು ಹಲವಾರು  ನಾಯಕರ ಗೈರು ಹಾಜರಿಯೊಂದಿಗೆ ಬಿಜೆಪಿಯ ನೂತನ ರಾಜಾಧ್ಯಾಕ್ಷರಾಗಿ ಯಡಿಯೂರಪ್ಪ ಅವರ ಮಗ ಬಿ.ವೈ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು. ಅವರಿಗೆ ನಿರ್ಗಮಿತ ಅಧ್ಯಕ್ಷ ನಳಿನಕುಮಾರ ಕಟೀಲು ಅವರು ಅಧಿಕಾರ ಹಸ್ತಾಂತರಿಸಿದರು.  ಬಿವೈ ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸುವ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಈಶ್ವರಪ್ಪ, ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ, ಮುರುಗೇಶ್‌ ನಿರಾಣಿ, ಎನ್‌ ಮಹೇಶ್‌, ರಾಮಚಂದ್ರಗೌಡ, ಶ್ರೀರಾಮುಲು ಮತ್ತಿತರರು ಉಪಸ್ಥಿತರಿದ್ದರು.

ಆದರೆ, ಹಿರಿಯ ಬಿಜೆಪಿ ನಾಯಕರಾದ ಆರ್‌. ಅಶೋಕ್‌, ಅಶ್ವತ್ಥ ನಾರಾಯಣ, ವಿ. ಸೋಮಣ್ಣ, ಅರವಿಂದ ಬೆಲ್ಲದ, ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಲಿಂಬಾಳಿ, ಎಸ್‌ಟಿ ಸೋಮಶೇಖರ್‌, ಡಾ.ಕೆ. ಸುಧಾಕರ ಮುಂತಾದವರು ಗೈರಾಗಿದ್ದರು.

ವಿಜಯೇಂದ್ರ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಯಡಿಯೂರಪ್ಪ,  ರಾಜ್ಯದಲ್ಲಿ ಬಿವೈ ವಿಜಯೇಂದ್ರರ ಹೆಗಲಿಗೆ  ಬಿಜೆಪಿ ಹೈಕಮಾಂಡ್‌ ನಾಯಕರಾದ ಪ್ರಧಾನಿ ಮೋದಿ,, ನಡ್ಡಾ,  ಅಮಿತ್‌ ಶಾ ಜವಾಬ್ದಾರಿ ಹೊರಿಸಿದ್ದಾರೆ. ಅವರೆಲ್ಲರ ನಿರೀಕ್ಷೆಯಂತೆ ನಾವೆಲ್ಲರೂ ಪಕ್ಷ ಸಂಘಟಿಸುವ ಕೆಲಸ ಮಾಡೋಣ ಎಂದರು.ನಳಿನಕುಮಾರ ಕಟೀಲು ಮಾತನಾಡಿ, ಇಷ್ಟು ದಿನ ನಾನು ಅಧ್ಯಕ್ಷನಾಗಿ ಪಕ್ಷ ಸಂಘಟಿಸುವ ಕೆಲಸ ಮಾಡಿದ್ದೇನೆ.  ಯಡಿಯೂರಪ್ಪನವರ ಮಾರ್ಗದರ್ಶನ ನನಗೆ ಸಿಕ್ಕದೆ. ನಾವು ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಕರ್ನಾಟಕದ 28 ಲೋಕಸಭಾ ಸ್ಥಾನಗಳನ್ನು ಗೆಲ್ಲಿಸುವ ಕೆಲಸವನ್ನು ಎಲ್ಲರೂ ಒಟ್ಟಾಗಿ ಮಾಡೋಣ ಎಂದರು.

ಪ್ರಮುಖ ಸುದ್ದಿ :-   ವಿಜಯಪುರದಲ್ಲಿ ಪಾಕ್ ಪರ ಪೋಸ್ಟ್ ಮಾಡಿದ ವಿದ್ಯಾರ್ಥಿನಿ ; ದೂರಿನ ನಂತರ ಕ್ಷಮೆಯಾಚನೆ

ಮಾಜಿ ಕೇಂದ್ರ ಸಚಿವ ಸದಾನಂದ ಗೌಡ, ನಾವು ಎಲ್ಲ ಅಧಿಕಾರ ಕಳೆದುಕೊಂಡೆವೊ ಅಲ್ಲಿಂದಲೇ ಅಧಿಕಾರ ಪಡೆಯಬೇಕು. ನಾವು ಯಡಿಯೂರಪ್ಪ ಅವರ ಮಾರ್ಗದರ್ಶನದಿಂದ ಎಲ್ಲವನ್ನೂ ಜಯಿಸಿದ್ದೇವೆ. ಈಗ ವಿಜಯೇಂದ್ರರನ್ನು ಪಕ್ಷ ಅಧ್ಯಕ್ಷರನ್ನಾಗಿ ಮಾಡಿದೆ. ಮುಂದೆ ನಾವು ಲೋಕಸಭಾ ಚುನಾವಣೆಯಲ್ಲಿ   ಹೆಚ್ಚು ಸ್ಥಾನ ಗೆಲ್ಲಬೇಕಿದೆ ಎಂದರು.

ಬಿಜೆಪಿ ನೂತನ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆಲ್ಲುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಆಗಿರುವ ಹಿನ್ನಡೆಯನ್ನು ಸರಿಪಡಿಸಿಕೊಳ್ಳೋಣ.  ನಾವು ಈಗ ಅಧಿಕಾರಕ್ಕೆ ಬಂದಿರುವ ಸರ್ಕಾರವು ಆಡಳಿತದಲ್ಲಿ ವಿಫಲವಾಗುತ್ತಿದೆ. ಹೂಡಿಕೆಗಳು ವಾಪಸ್ಸಾಗುತ್ತಿವೆ. ಬರ ಪರಿಸ್ಥಿತಿ ಇದ್ದರೂ ಐಷರಾಮಿ ಜೀವನಕ್ಕೆ ಮಣೆ ಹಾಕಲಾಗುತ್ತಿದೆ ಎಂದು ಟೀಕಿಸಿದರು..

ರಾಜ್ಯದ ಸಚಿವರು ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ, ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭ್ರಷ್ಟ ಕಾಂಗ್ರೆಸ್‌ ಸರ್ಕಾರಕ್ಕೆ ತಕ್ಕ ಉತ್ತರ ನೀಡಬೇಕಾಗಿದೆ, ಜಿಲ್ಲಾ ಪಂಚಾಯತ ಚುನಾವಣೆಗಳಲ್ಲೂ ನಾವು ಅಧಿಕಾರ ಹಿಡಿಯಬೇಕಾಗಿದೆ. ಅನೇಕ ಹಿರಿಯ ನಾಯಕರು, ಕಾರ್ಯಕರ್ತರ ಶ್ರಮದಿಂದ ಮೋದಿ ಅವರ ಈ ದೇಶದ ಭವಿಷ್ಯಕ್ಕಾಗಿ ಮತ್ತೆ ಪ್ರಧಾನಿ ಮೋದಿ ಅವರನ್ನು ಪ್ರಧಾನಿಯಾಗಿ ಮಾಡಬೇಕು ಎಂದರು.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

ನಾನು ರಾಜ್ಯಾಧ್ಯಕ್ಷನಾಗುವ ಮುಂಚೆ ನಾನು ಬಿಜೆಪಿ ಕಾರ್ಯಕರ್ತ. ಆದರೆ ಬಿಜೆಪಿ ರಾಜ್ಯಾಧ್ಯಕ್ಷನಾದ ಮೇಲೆ  ಜಾತಿ ಭೇದ ಮಾಡದೆ ಬಿಜೆಪಿಯ ಅಧಿಕಾರಕ್ಕೆ ತರಲು ಶ್ರಮ ಹಾಕಬೇಕಿದೆ. ಈ ನಾಡಿನ ಅಭಿವೃದ್ದಿಗೆ ಒತ್ತು ಕೊಡಬೇಕಿದೆ. ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ. ನನ್ನ ಮೇಲೆ ವಿಶ್ವಾಸ ಇಟ್ಟು ನೇಮಕ ಮಾಡಿದ ಎಲ್ಲ ನಾಯಕರಿಗೆ ಈ ಸಂದರ್ಭದಲ್ಲಿ ನಾನು ಅಭಾರಿಯಾಗಿದ್ದೇನೆ ಎಂದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement