ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶರಣರು ಬಿಡುಗಡೆ

ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ತಿಂಗಳಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಗುರುವಾರ ಬಿಡುಗಡೆಯಾಗಿದ್ದಾರೆ.
ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ‌ ಸಂಬಂಧಚಿತ್ರದುರ್ಗದ ಎರಡನೇ ಹೆಚ್ಚುವರಿ‌ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ ಬುಧವಾರ ಮಧ್ಯಾಹ್ನ ಬಿಡುಗಡೆಗೆ ಆದೇಶ ಮಾಡಿತ್ತು.

ಆದರೆ, ಆದೇಶ ಪ್ರತಿ ಬುಧವಾರ ಸಂಜೆ ಒಳಗೆ ತಲುಪಲು ವಿಳಂಬವಾದ ಕಾರಣ ಗುರುವಾರ ಬೆಳಗ್ಗೆ ಜಿಲ್ಲಾ ಕಾರಾಗೃಹದಲ್ಲಿ ಬಿಡುಗಡೆ ಪ್ರಕ್ರಿಯೆ ನಡೆಸಿ ಮಧ್ಯಾಹ್ನ 12:40ರ ಸುಮಾರಿಗೆ ಅವರು ಬಿಡುಗಡೆಯಾದರು.
ಜೈಲಿನಿಂದ ಹೊರಗೆ ಬಂದ ಮುರುಘಾ ಶರಣರನ್ನು ಭಕ್ತರು, ವಕೀಲರು‌ ಸ್ವಾಗತಿಸಿದರು. ಇಲ್ಲಿಂದ ಶರಣರು‌ ದಾವಣಗೆರೆ ವಿರಕ್ತ‌ಮಠಕ್ಕೆ ಹೋದರು.

ಒಂದನೇ ಪೋಕ್ಸೋ ಪ್ರಕರಣರದಲ್ಲಿ ನವೆಂಬರ್ 8ರಂದು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶರಣರನ್ನು‌ ಬಿಡುಗಡೆ ಮಾಡಲಾಗಿದೆ. ಜೈಲಿನಿಂದ ಬಿಡುಗಡೆಗೊಂಡಿರುವ ಮುರುಘಾ ಶರಣರಿಗೆ ಕೋರ್ಟ್ ಕೆಲವು ಷರತ್ತು ವಿಧಿಸಿದ್ದು ಅದರಂತೆ ವಿಚಾರಣೆ ಮುಗಿಯುವವರೆಗೂ ಶ್ರೀಗಳು ಚಿತ್ರದುರ್ಗಕ್ಕೆ ಹೋಗುವಂತಿಲ್ಲ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement