ರಾಜ್ಯದ ಈ ಜಿಲ್ಲೆಗಳಲ್ಲಿ ನವೆಂಬರ್‌ 22ರ ವರೆಗೂ ಮಳೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನವೆಂಬರ್ 19ರಿಂದ 3 ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ, ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ಒಡಿಶಾ ಕರಾವಳಿ, ಪಶ್ಚಿಮ ಬಂಗಾಳ, ಮಣಿಪುರ, ಮೇಘಾಲಯ, ಮಿಜೋರಾಂ, ತ್ರಿಪುರ ಸೇರಿದಮತೆ ಹಲವೆಡೆ ನವೆಂಬರ್ 17ರಂದು ಹೆಚ್ಚು ಮಳೆಯಾಗಲಿದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement