ನಟಿ, ಮಾಜಿ ಸಂಸದೆ ವಿಜಯಶಾಂತಿ ಬಿಜೆಪಿಗೆ ಗುಡ್‌ ಬೈ

ಹೈದರಾಬಾದ್: ತೆಲಂಗಾಣ ವಿಧಾನಸಭೆಗೆ ಕೆಲವೇ ದಿನಗಳಿರುವಾಗ ಮಾಜಿ ಸಂಸದೆ, ನಟಿ ವಿಜಯಶಾಂತಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ವರದಿಗಳ ಪ್ರಕಾರ ವಿಜಯಶಾಂತಿ ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಜಿ.ಕಿಶನ್ ರೆಡ್ಡಿ ಅವರಿಗೆ ಕಳುಹಿಸಿದ್ದಾರೆ. ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಭಾಗವಹಿಸುವ ಸಮಾರಂಭದಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ವರದಿಗಳಿವೆ.

1998 ರಲ್ಲಿ ದಕ್ಷಿಣದ ಜನಪ್ರಿಯ ತಾರೆ ಬಿಜೆಪಿಯೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಅವರನ್ನು ಪಕ್ಷದ ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ನಂತರ, ಅವರು ತೆಲಂಗಾಣ ರಾಜ್ಯ ಆಂದೋಲನದ ಉತ್ತುಂಗದಲ್ಲಿ ತನ್ನದೇ ಆದ ಪಕ್ಷವನ್ನು ಸ್ಥಾಪಿಸಿದರು ಮತ್ತು ನಂತರ ಅದನ್ನು ಟಿಆರ್‌ಎಸ್‌ ಜೊತೆ ವಿಲೀನಗೊಳಿಸಿದರು.

2009 ರಲ್ಲಿ, ಅವರು ಟಿಆಆರ್‌ ಎಸ್‌ ಅಭ್ಯರ್ಥಿಯಾಗಿ ಮೇದಕ್ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾದರು. ಆದರೆ, ಪಕ್ಷದ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ, 2014 ರಲ್ಲಿ, ಅವರು ಟಿಆರ್‌ಎಸ್‌ಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರಿ ಮೇದಕ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತರು. ಅವರು 2018 ರ ವಿಧಾನಸಭಾ ಚುನಾವಣೆ ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರಾಗಿದ್ದರು. ಆದರೆ, 2020 ರಲ್ಲಿ ಬಿಜೆಪಿ ಸೇರಿದರು. ಈಗ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಮರಳಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಆಯ್ಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement