ಜೆಡಿಎಸ್ ನಿಂದ ಸಿ.ಎಂ. ಇಬ್ರಾಹಿಂ ಅಮಾನತು

ಬೆಂಗಳೂರು: ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಇಬ್ರಾಹಿಂ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಇದು ಮತ್ತು ಇನ್ನೂ ಕೆಲವು ಕಾರಣಗಳಿಗಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಆದೇಶದಲ್ಲಿ ಅವರು ತಿಳಿಸಿದ್ದಾರೆ.

ಅಲ್ಲದೆ ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷವನ್ನು ಸಂಘಟನೆ ಮಾಡಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಈ ಸಂಬಂಧ ನಡೆದ ಸಭೆಗಳಲ್ಲಿ ಸಿ.ಎಂ. ಇಬ್ರಾಹಿಂ ಅವರು ಉಪಸ್ಥಿತರಿದ್ದು ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದರು. ತದನಂತರ ಈ ತೀರ್ಮಾನದ ವಿರುದ್ಧ ವಿರೋಧಭಾಸ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ. ಈ ಕಾರಣಗಳಿಗಾಗಿ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜೆಡಿಎಸ್ ಸಂವಿಧಾನದ ಸೆಕ್ಷನ್ 10ರ ಅನ್ವಯ ನವೆಂಬರ್ 19ರಿಂದ ಅನ್ವಯವಾಗುವಂತೆ ವಿಸರ್ಜನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ದೇವೇಗೌಡರು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದನ್ನು ವಿರೋಧಿಸಿದ್ದ ಸಿಎಂ ಇಬ್ರಾಹಿಂ ಪ್ರತ್ಯೇಕ ಸಭೆ ನಡೆಸಿದ್ದರು. ಪಕ್ಷದ ನಾಯಕರ ನಡೆಯನ್ನು ಬಹಿರಂಗವಾಗಿಯೇ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯ ಸಮಿತಿಯನ್ನು ವಿಸರ್ಜಿಸಿ ಅಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಕೈ ಬಿಟ್ಟು ಎಚ್.ಡಿ. ಕುಮಾರಸ್ವಾಮಿಯವರಿಗೆ ಅವರನ್ನು ನೇಮಕ ಮಾಡಲಾಗಿತ್ತು.
ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡಿದ್ದ ಇಬ್ರಾಹಿಂಗೆ ಮತ್ತೊಂದು ಶಾಕ್ ನೀಡಲಾಗಿದ್ದು, ಅವರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement