ಬಿಜೆಪಿ ಸಂಸದರ ಪುತ್ರನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ; ದೂರು ದಾಖಲು

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬರನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ ಆರೋಪದ ಮೇಲೆ ಬಳ್ಳಾರಿ ಸಂಸದರ ಪುತ್ರನ ಮೇಲೆ ದೂರು ದಾಖಲಾಗಿದೆ ಎಂದು ವರದಿಯಾಗಿದೆ.
ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರು ಪುತ್ರ ರಂಗನಾಥ ಅವರ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿರುವ ರಂಗನಾಥ್ ಅವರ ವಿರುದ್ಧ ಬೆಂಗಳೂರು ಮೂಲದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ

ಒಂದೂವರೆ ವರ್ಷದ ಹಿಂದೆ ರಂಗನಾಥ್ ಪಾರ್ಟಿವೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದರಂತೆ. ಬಳಿಕ ಮೈಸೂರಿನ ಹೋಟೆಲ್‌ನಲ್ಲಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಇಬ್ಬರಿಗೂ ನೋಟೀಸ್ ನೀಡಿ ವಿಚಾರಣೆ ಹಾಜರಾಗುವಂತೆ ತಿಳಿಸಿದೆ. ಯುವತಿಗೆ ಸೂಕ್ತ ದಾಖಲಾತಿಗಳೊಂದಿಗೆ ಬರುವಂತೆ ತಿಳಿಸಿದರೆ ರಂಗನಾಥ ಅವರಿಗೂ ವಿಚಾರಣೆ ಹಾಜರಾಗುವಂತೆ ಸೂಚಿಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ಪ್ರತಿ ದೂರು ದಾಖಲು….
ಫೋಟೋ ಮತ್ತು ಆಡಿಯೋ ಇಟ್ಟುಕೊಂಡು ₹15 ಲಕ್ಷ ನೀಡುವಂತೆ ಬ್ಲಾಕ್‌ ಮೇಲ್ ಮಾಡುತ್ತಿದ್ದಾರೆ ಎಂದು ರಂಗನಾಥ ಅವರು ಯುವತಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ. ಯುವತಿಯು ಸ್ನೇಹಿತರ ಮೂಲಕ ಪರಿಯಚವಾಗಿದ್ದು, ಆಕೆ ಜತೆ ನಾನು ಇರುವ ಫೋಟೋಗಳನ್ನು ನನ್ನ ಪತ್ನಿಗೆ ಕಳುಹಿಸಿ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿ, ಮಾನಸಿಕ ಹಿಂಸೆ ನೀಡಿದ್ದಾರೆರೆ. ಪದೇ ಪದೇ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. 15 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದಾರೆ. ಸದ್ಯ ಯುವತಿ ಮತ್ತು ರಂಗನಾಥ ಅವರು ದೂರು ಮತ್ತು ಪ್ರತಿದೂರು ದಾಖಲು ಮಾಡಿದ್ದು, ಪೊಲೀಸ್ ತನಿಖೆ ಬಳಿಕ ಸತ್ಯಾಸತ್ಯತೆ ತಿಳಿದು ಬರಲಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement