ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಕೆಯಾಗಿದೆ.
ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. ಸುಮಾರು 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲರಾದ ನಟರಾಜ ಶರ್ಮಾ ಎಂಬವರು ಲೋಕಾಯಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜೆ.ಸಿ.ಪ್ರಕಾಶ್ ಹಾಗೂ ಇಲಾಖೆಯ ನಿರ್ದೇಶಕರ ವಿರುದ್ಧವೂ ದೂರು ನೀಡಲಾಗಿದೆ.

ಅದರಲ್ಲಿ ಆಹಾರ ಸರಬರಾಜಿಗೆ ಕಪ್ಪುಪಟ್ಟಿಯಲ್ಲಿರುವ ಕಂಪನಿಯೊಂದಕ್ಕೆ ಟೆಂಡರ್ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಗುತ್ತಿಗೆದಾರರಿಂದ ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿಲ್ಲ ಎಂಬ ದೂರಿನ ಮೇರೆಗೆ ಸ್ಥಳೀಯ ಸೇವಾ ಸಂಘಗಳೇ ಆಹಾರ ಪೂರೈಕೆ ಮಾಡಬೇಕು ಎಂದು ಹೈಕೋರ್ಟ್ ಆದೇಶ ನೀಡಿತ್ತು. ಆದರೆ, ಈ ಇಲಾಖೆಯು ಆದೇಶ ಉಲ್ಲಂಘಿಸಿ, ಕಪ್ಪುಪಟ್ಟಿಯಲ್ಲಿರುವ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement