ಮುಸ್ಲಿಂ ಸ್ಪೀಕರಿಗೆ ಬಿಜೆಪಿಯ ದೊಡ್ಡ ದೊಡ್ಡ ನಾಯಕರೂ ನಮಸ್ಕರಿಸ್ತಾರೆ, ಇದನ್ನು ಕಾಂಗ್ರೆಸ್‌ ಮಾಡಿದೆ : ಸಚಿವ ಜಮೀರ್ ಅಹಮ್ಮದ್‌ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸ್ಪೀಕರ್ ಯು.ಟಿ. ಖಾದರ್‌ ಅವರಿಗೆ ಕೈಮುಗಿದು ನಮಸ್ಕರಿಸಬೇಕಾಗಿದೆ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ್ದಾರೆ.
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಪ್ರಚಾರ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, “ಇಂದು ಬಿಜೆಪಿಯವರು ಎದ್ದು ನಿಂತು ನಮ್ಮ ಯುಟಿ ಖಾದರ್ ಅವರಿಗೆ ನಮಸ್ಕಾರ ಮಾಡಬೇಕಾಗಿದೆ. ಇದನ್ನು ಕಾಂಗ್ರೆಸ್ ಮಾಡಿದೆ ಎಂದು ತೆಲಂಗಾಣದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್​​ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಸ್ಥಾನಮಾನಗಳನ್ನು ಒತ್ತಿ ಒತ್ತಿ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಅಧಿಕಾರದ ಮೊದಲು ಮುಸ್ಲಿಂ ಸ್ಪೀಕರ್ ಇರಲಿಲ್ಲ, ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ. ಈಗ ಬಿಜೆಪಿಯವರು ಸ್ಪೀಕರ್ ಯು.ಟಿ. ಖಾದರ್ ಅವರನ್ನು ಗೌರವದಿಂದ ಒಪ್ಪಿಕೊಳ್ಳಬೇಕು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 9 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.
ಡಿಸೆಂಬರ್ 4 ರಿಂದ 15 ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಸರ್ಕಾರ ಸಿದ್ಧತೆ ನಡೆಸುತ್ತಿರುವಾಗ ಜಮೀರ್ ಖಾನ್ ಅವರ ವಿವಾದಾತ್ಮಕ ಹೇಳಿಕೆಗಳು ಬಂದಿವೆ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement