ವೀಡಿಯೊ ವಿವೇಕಾನಂದ, 48 ಗಂಟೆಗಳ ಒಳಗೆ ವರ್ಗಾವಣೆ ಪಟ್ಟಿಯಲ್ಲಿ ನುಸುಳಿದ್ದು ಹೇಗೆ..? ಗುಪ್ತವಾರ್ತೆಯಿಂದ ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದದ್ದು ಹೇಗೆ? :ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು..

ಬೆಂಗಳೂರು: “ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವೀಡಿಯೊದಲ್ಲಿ ನುಸುಳಿದ್ದ ವಿವೇಕಾನಂದ ಎಂಬವರು 48 ಗಂಟೆಗಳ ಒಳಗಾಗಿಯೇ ವರ್ಗಾವಣೆ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ವೀಡಿಯೊ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಉತ್ತರ ಕೊಡಿ ಸಿದ್ದರಾಮಯ್ಯನವರೇ.. ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ನಾಲಿಗೆ ಮೇಲೆ ನೈತಿಕತೆಯ ನಾಟ್ಯ! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ! ಕೊನೆಗೆ, ಝಣ ಝಣ ಕಾಂಚಾಣ, ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! .. ನಾಚಿಕೆ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಅವರು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಒಂದು ಸರ್ಕಾರ, ವಿಸ್ಮಯಗಳ ಆಗರ ಎಂದು ಲೇವಡಿ ಮಾಡಿದ್ದಾರೆ. ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು, ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ನೀವು ಹೇಳಿದ್ದೀರಲ್ಲವೇ..?. ಹಾಗಾದರೆ, 71 ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು ಏನಂತೀರಿ? ಎಂದು ಪ್ರಶ್ನಿಸಿದ್ದಾರೆ.

“ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂಗಳದ್ದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ, ‘ಕಾಸಿಗಾಗಿ ಹುದ್ದೆ ಮತ್ತು ಕಾಂಗ್ರೆಸ್‌ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-ಡಿಸಿಎಂ ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-ಡಿಸಿಎಂ ನಿರ್ದೇಶಕ.. ಹೇಗಿದೆ? ಎಂದು ಲೇವಡಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಒಪ್ಪಂದ ಆಗಿದ್ದರೆ ಅವರಿಬ್ಬರೇ ರಾಜಕಾರಣ ನಡೆಸಲಿ, ನಾವೆಲ್ಲ ಯಾಕೆ ಬೇಕು? : ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಸಚಿವ ಪರಮೇಶ್ವರ ಅಸಮಾಧಾನ

ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಎಂದು ಹೇಳುತ್ತೀರಿ, ಅದೆಲ್ಲ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವೀಡಿಯೊ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement