ಅನುಮತಿ ಇಲ್ಲದೆ ನಿರ್ಮಾಣ ಹಂತದ ಮೇಲ್ಸೇತುವೆ ಉದ್ಘಾಟನೆ: ಆದಿತ್ಯ ಠಾಕ್ರೆ ವಿರುದ್ಧ ಎಫ್‌ ಐ ಆರ್

ಮುಂಬೈ: ಕಾಮಗಾರಿ ಪೂರ್ಣವಾಗದ ಸೇತುವೆಯನ್ನು ಉದ್ಘಾಟಿಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಅಧಿಕಾರಿಗಳ ಅನುಮತಿ ಇಲ್ಲದೆ ನಗರದ ಲೋವರ್ ಪರೆಲ್‌ ನಲ್ಲಿರುವ ಡೆಲಿಸ್ಲೆ ಮೇಲ್ಸೇತುವೆಯನ್ನು ಉದ್ಘಾಟಿಸಿದ ಆರೋಪದ ಮೇಲೆ ಶಿವಸೇನಾ (ಉದ್ಧವ್ ಠಾಕ್ರೆ ಬಣ) ನಾಯಕ ಆದಿತ್ಯ ಠಾಕ್ರೆ, ಸುನಿಲ ಶಿಂಧೆ ಹಾಗೂ ಸಚಿನ್ ಅಹಿರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆದಿತ್ಯ ಠಾಕ್ರೆ ಹಾಗೂ ಇತರರು ನವೆಂಬರ್ 16ರಂದು ಮೇಲ್ಸೇತುವೆ ಉದ್ಘಾಟಿಸಿದ್ದಾರೆ. ಆದರೆ, ಸೇತುವೆಯ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.

ಈ ಬಗ್ಗೆ ಬೃಹತ್ ಮುಂಬೈ ಮಹಾನಗರ ಪಾಲಿಗೆ (ಬಿಎಂಸಿ) ಅಧಿಕಾರಿಗಳು ದೂರು ನೀಡಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸಂಬಂಧ ಎನ್.ಎಂ.ಜೋಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ, ಸೇತುವೆಯ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅಲ್ಲದೆ ಬಳಕೆಗೆ ಸುರಕ್ಷಿತವೆಂದು ಪ್ರಮಾಣೀಕರಿಸಲಾಗಿಲ್ಲ.
ದೂರಿನ ಹಿನ್ನೆಲೆಯಲ್ಲಿ ಆದಿತ್ಯ ಠಾಕ್ರೆ ಜೊತೆಗೆ ಸುನಿಲ್ ಶಿಂಧೆ ಹಾಗೂ ಸಚಿನ್ ಅಹಿರ್ ವಿರುದ್ಧ ಐಪಿಸಿ ಸೆಕ್ಷನ್ 143 (ದಂಡನೆ), 149 (ಅಕ್ರಮವಾಗಿ ಗುಂಪುಗೂಡುವಿಕೆ), 336 ಜೀವನ ಅಥವಾ ಇತರರ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕಾಯಿದೆ) ಹಾಗೂ 447 (ಕ್ರಿಮಿನಲ್ ಅತಿಕ್ರಮಣಕ್ಕೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಚುನಾವಣಾ ಆಯೋಗದಿಂದ 8,889 ಕೋಟಿ ರೂ.ಮೌಲ್ಯದ ವಸ್ತುಗಳ ವಶ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement