ಡೀಪ್‌ಫೇಕ್ ಎಫೆಕ್ಟ್ : ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಡೀಪ್ ಫೇಕ್ ವಿಡಿಯೋ ಮೂಲಕ ನಟಿಯರು ಸೇರಿದಂತೆ ಹಲವು ಮಹಿಳೆಯರ ಮಾನ ಕಳೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇದಕ್ಕೆ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದ್ದಾರೆ.
ಇಂತಹ ವೀಡಿಯೊಗಳಿಂದ ಯಾರೇ ಆದರೂ ತೊಂದರೆಗೆ ಸಿಲುಕಿದ್ದರೆ, ಸಹಾಯವಾಣಿಗೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ. ಕರೆ ಮಾಡಬೇಕಾದ ಹೆಲ್ಪ್ ಲೈನ್ ನಂಬರ್ ಕೂಡ ನೀಡಿದ್ದಾರೆ. ಯಾರಾದರೂ ಅಂತಹ ವಿಡಿಯೋಗಳಿಂದ ನೊಂದಿದ್ದರೆ 1930 ಸಂಖ್ಯೆಗೆ ಕರೆ ಮಾಡಬಹುದು.

ಹಿಂಜರಿಯಬೇಡಿ, ಜಾಗೃತರಾಗಿ! ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಡೀಪ್ ಫೇಕ್ ಗೆ ಒಳಗಾಗಿದ್ದಲ್ಲಿ, 1930 ಗೆ ಕರೆಮಾಡಿ ಬೆಂಗಳೂರು ನಗರ ಪೊಲೀಸರನ್ನು ಸಂಪರ್ಕಿಸಿ. ಡಿಜಿಟಲ್ ವಂಚನೆಯಿಂದ ನಿಮ್ಮನ್ನು ರಕ್ಷಿಸಲು ನಾವು ನಿಮ್ಮೊಂದಿಗಿದ್ದೇವೆ ಎಂದು ಟ್ವೀಟ್​​ ಮಾಡಲಾಗಿದೆ.
ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‍, ಕಾಜೋಲ್ ಸೇರಿದಂತೆ ಅನೇಕ ಕಲಾವಿದರ ಮತ್ತು ಸಾಮಾನ್ಯ ಮಹಿಳೆಯರ ಡೀಪ್‌ಫೇಕ್ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿ ಆತಂಕ ಸೃಷ್ಟಿಸಿದೆ.

ಏನಿದು ಡೀಪ್‌ಫೇಕ್‌ ತಂತ್ರಜ್ಞಾನ?…
ಈ ಡೀಪ್‌ಫೇಕ್‌ ತಂತ್ರಜ್ಞಾನ ಉಚಿತ, ವ್ಯಾಪಕವಾಗಿ ಲಭ್ಯವಿದೆ. ಯಾವುದೇ ತಾಂತ್ರಿಕ ಪರಿಣತಿಯ ಅಗತ್ಯವಿಲ್ಲ. ಈ ಅಪ್ಲಿಕೇಶನ್‌ಗಳು ಬಳಕೆದಾರರಿಗೆ, ಚಿತ್ರಗಳನ್ನು ಡಿಜಿಟಲ್‌ ಸಹಾಯದಿಂದ ತೆಗೆದುಹಾಕಲು ಅಥವಾ ಅಶ್ಲೀಲ ವೀಡಿಯೊಗಳಲ್ಲಿ ಅವರ ಮುಖಗಳೊಂದಿಗೆ ಸೇರಿಸಲು ಇದು ಅನುಮತಿಸುತ್ತದೆ. ಡೀಪ್‌ಫೇಕ್‌ ತಂತ್ರಜ್ಞಾನದಲ್ಲಿ ಒಬ್ಬರ ದೇಹಕ್ಕೆ ಇನ್ನೊಬ್ಬರ ತಲೆಯನ್ನು ಜೋಡಿಸಿ ಎಡಿಟಿಂಗ್‌ ಎಡಿಟ್​​ ಜೋಡಿಸಿದರೆ ಯಾವುದೇ ಅನುಮಾನ ಬರುವುದಿಲ್ಲ. ಆ ರೀತಿ ಫೋಟೋ/ವೀಡಿಯೋ ಎಡಿಟ್‌ ಮಾಡಲಾಗುತ್ತದೆ. ಇದು ಈಗ ಕಳವಳಕ್ಕೆ ಕಾರಣವಾಗಿದೆ.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement