ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ

ಕಲಬುರಗಿ : ಬಿಜೆಪಿಯ ಮುಖಂಡ ಮಣಿಕಂಠ ರಾಠೋಡ್ ಮೇಲೆ ಶನಿವಾರ (ನವೆಂಬರ್‌18) ತಡರಾತ್ರಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಜಿಲ್ಲೆಯ ಶಹಾಬಾದ ತಾಲೂಕಿನ ಶಂಕರವಾಡಿ ಕ್ರಾಸ್‌ ಸಮೀಪ ಕಾಗಿಣಾ ಸೇತುವೆ ಬಳಿ ನಡೆದಿದೆ ಎಂದು ವರದಿಯಾಗಿದೆ.
ಮಾಲಗತ್ತಿ ಸಮೀಪದ ತಮ್ಮ ತೋಟದ ಮನೆಯಿಂದ ರಾತ್ರಿ 1 ಗಂಟೆ ಸುಮಾರಿಗೆ ಕಲಬುರಗಿಯ ತಮ್ಮ ಮನೆಗೆ ಬರುತ್ತಿದ್ದ ವೇಳೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರ ಕಾರನ್ನು ದುಷ್ಕರ್ಮಿಗಳು ಸೇತುವೆ ಹತ್ತಿರ ತಡೆದಿದ್ದಾರೆ. ನಂತರ ಮದ್ಯದ ಬಾಟಲಿಗಳಿಂದ ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ. ಅವರ ತಲೆ, ಕೈ ಹಾಗೂ ಕಿವಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹಲ್ಲೆಕೋರರು ಪರಾರಿಯಾಗಿದ್ದಾರೆ. ಅವರನ್ನು ತಕ್ಷಣವೇ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಣಿಕಂಠ ರಾಠೋಡ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪುರ ಮೀಸಲು ಮತಕ್ಷೇತ್ರದಿಂದ ಕಾಂಗ್ರೆಸ್ಸಿನ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement