ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವಿನ ಪ್ರಕರಣ : ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಇಬ್ಬರು ಅಧಿಕಾರಿಗಳ ಅಮಾನತು

ಬೆಂಗಳೂರು : ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದ ಪರಿಣಾಮ ಮಹಿಳೆ ಮತ್ತು ಮಗು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಸ್ಕಾಂನ ಎಇ ಹಾಗೂ ಎಇಇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.
ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮೃತಪಟ್ಟ ಘಟನೆ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್‌ ಬಳಿ ನಡೆದಿತ್ತು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಆರಂಭಿಸಿದ್ದೇವೆ  ವರದಿಯನ್ನು ಎದುರು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ಅಪಘಾತಕ್ಕೆ ಕಾರಣರಾದ ಎಇ ಮತ್ತು ಎಇಇಯನ್ನು ಅಮಾನತುಗೊಳಿಸಲಾಗಿದೆ. ಮತ್ತು ಇದಕ್ಕೆ ಕಾರಣಾದವರು ಯಾರೇ ಇದ್ದರೂ ನಿರ್ದಾಕ್ಷಿಣ್ಯಯವಾಗಿ ಕ್ರಮ ಜರುಗಿಸಲಾಗುವುದು.ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ ಎಂದು ಹೇಳಿದ್ದಾರೆ.

ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದ ತಾಯಿ ಹಾಗೂ ಮಗಳು, ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ಬಸ್ ಇಳಿದು ನಡೆದುಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದಿದ್ದಾರೆ. ಕ್ಷಣಾರ್ಧದಲ್ಲಿ ವಿದ್ಯುತ್ ಪ್ರವಹಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸೌಂದರ್ಯ ಅವರ ಪತಿ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement