ಕ್ರಿಕೆಟ್‌ ವಿಶ್ವಕಪ್ 2023 : ರನ್ ಗಳಿಕೆಯಲ್ಲಿ ವಿರಾಟ್ ಕೊಹ್ಲಿ ನಂ.1, ಮೊಹಮ್ಮದ್‌ ಶಮಿಗೆ ಅತಿ ಹೆಚ್ಚು ವಿಕೆಟ್

ಅಹಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿರುವ ಭಾರತ ತಂಡದ ಪ್ರಶಸ್ತಿ ಕನಸು ಭಗ್ನಗೊಂಡಿದೆ.
ಸತತ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿ ರೋಹಿತ್ ಶರ್ಮಾ ಬಳಗವು ಫೈನಲ್‌ಗೆ ಪ್ರವೇಶಿಸಿತ್ತು. ಆದರೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಆರು ವಿಕೆಟ್ ಅಂತರದಿಂದ ಗೆದ್ದು ಆರನೇ ಬಾರಿಗೆ ವಿಶ್ವಕಪ್‌ ಮುಡಿಗೇರಿಸಿಕೊಂಡಿತು. ಭಾರತ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ಆದರೂ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಹಾಗೂ ಹೆಚ್ಚು ವಿಕೆಟ್‌ ಪಡೆದವರಲ್ಲಿ ಭಾರತದ ಆಟಗಾರರೇ ಮೊದಲಿಗರಾಗಿದ್ದಾರೆ. ವಿಶ್ವಕಪ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್‌ ಗಳಿಸಿದರೆ ಹಾಗೂ ಮೊಹಮ್ಮದ್‌ ಶಮಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ ಆಗಿದ್ದಾರೆ.

ವಿರಾಟ್ ಕೊಹ್ಲಿ 11 ಪಂದ್ಯಗಳಲ್ಲಿ 95.62ರ ಸರಾಸರಿಯಲ್ಲಿ ಒಟ್ಟು 765 ರನ್ ಗಳಿಸಿದ್ದಾರೆ. ಆ ಮೂಲಕ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರಲ್ಲಿ ಮೂರು ಶತಕ ಹಾಗೂ ಆರು ಅರ್ಧಶತಕಗಳು ಸೇರಿವೆ. ವಿಶ್ವಕಪ್‌ ಯಾವುದೇ ಆವೃತ್ತಿಯಲ್ಲಿ ಇದು ಸಾರ್ವಕಾಲಿಕ ಅತಿ ಹೆಚ್ಚು ರನ್‌ ಗಳಾಗಿವೆ. ಹೀಗಾಗಿ ವಿರಾಟ್ ಕೊಹ್ಲಿ ಅರ್ಹವಾಗಿಯೇ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ವಿಶ್ವಕಪ್‌ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿ:
ವಿರಾಟ್ ಕೊಹ್ಲಿ: 765
ರೋಹಿತ್ ಶರ್ಮಾ: 597
ಕ್ವಿಂಟನ್ ಡಿಕಾಕ್: 594
ರಚಿನ್ ರವೀಂದ್ರ: 578
ಡೆರಿಲ್ ಮಿಚೆಲ್: 552

ಪ್ರಮುಖ ಸುದ್ದಿ :-   ಟಿವಿ, ಸಿನಿಮಾದಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಸಂದೇಶ ಪ್ರಶ್ನಿಸಿ ಅರ್ಜಿ : ವಿಷಾದ ಸೂಚಿಸಿ ಅಫಿಡವಿಟ್ ಸಲ್ಲಿಸಲು ವಕೀಲನಿಗೆ ದೆಹಲಿ ಹೈಕೋರ್ಟ್ ಸೂಚನೆ

ವಿಶ್ವಕಪ್‌ ಈ ಆವೃತ್ತಿಯಲ್ಲಿ ಭಾರತದ ವೇಗಿ ಮೊಹಮ್ಮದ್ ಶಮಿ ಏಳು ಪಂದ್ಯಗಳಲ್ಲಿ ಒಟ್ಟು 24 ವಿಕೆಟ್ ಪಡೆದಿದ್ದಾರೆ. ಮೂರು ಬಾರಿ ಐದು ವಿಕೆಟ್ ಸಾಧನೆ ಮಾಡಿದ ಶಮಿ, ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಏಳು ವಿಕೆಟ್ ಪಡೆದಿರುವುದು ಅವರ ಉತ್ತಮ ಸಾಧನೆಯಾಗಿದೆ.
ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿ:
ಮೊಹಮ್ಮದ್ ಶಮಿ: 24
ಆಡಂ ಜಂಪಾ: 23
ಮಧುಶಂಕಾ: 21
ಜಸ್‌ಪ್ರೀತ್ ಬೂಮ್ರಾ: 20

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement