ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತದ ತಂಡ ಪ್ರಕಟ: ಹೊಸ ಮುಖಗಳಿಗೆ ಮಣೆ, ಸೂರ್ಯಕುಮಾರ ಯಾದವ್ ನಾಯಕ

ನವದೆಹಲಿ : ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಪ್ರಾರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ T20I ಸರಣಿಗೆ ಸೂರ್ಯಕುಮಾರ ಯಾದವ್ ಅವರನ್ನು ಭಾರತ ಕ್ರಿಕೆಟ್ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ.
ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡದ ಭಾಗವಾಗಿದ್ದ ಹೆಚ್ಚಿನ ಆಟಗಾರರಿಗೆ ವಿಶ್ರಾಂತಿ ನೀಡಿರುವುದರಿಂದ ತಂಡವು ಹೊಸ ಆಟಗಾರರನ್ನು ಹೊಂದಿದೆ. ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ ಅವರು ಈ ಸರಣಿಗೆ ಉಪನಾಯಕರಾಗಿ ನೇಮಕಗೊಂಡಿದ್ದಾರೆ. ಭಾರತದ T20 ತಂಡಕ್ಕೆ ಏಕದಿನ ಕ್ರಿಕೆಟ್ ವಿಶ್ವಕಪ್ 2023 ತಂಡದಿಂದ ಪ್ರಸಿದ್ಧ್ ಕೃಷ್ಣ, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ ಯಾದವ್‌ ಈ ಮೂವರು ಆಟಗಾರರನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಆದಾಗ್ಯೂ, ಶ್ರೇಯಸ್ ಅಯ್ಯರ್ ಅವರು ರಾಯ್‌ಪುರ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಎರಡು T20I ಗಳಿಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ ಮತ್ತು ಅವರು ಗಾಯಕ್‌ವಾಡ್‌ ಅವರಿಂದ ಉಪನಾಯಕನ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ತಿರುವನಂತಪುರಂ ಎರಡನೇ ಟಿ20ಐಗೆ ಆತಿಥ್ಯ ವಹಿಸಲಿದ್ದು, ಗುವಾಹತಿಯಲ್ಲಿ ಮೂರನೇ ಟಿ20 ಪಂದ್ಯ ನಡೆಯಲಿದೆ.

ಈ ವರ್ಷ ಹಲವು ಸರಣಿಗಳಲ್ಲಿ T20I ಗಳಲ್ಲಿ ಭಾರತದ ತಂಡವನ್ನು ಮುನ್ನಡೆಸಿದ್ದ ಭಾರತದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಬಾಂಗ್ಲಾದೇಶ ವಿರುದ್ಧದ ಕ್ರಿಕೆಟ್ ವಿಶ್ವಕಪ್ ಲೀಗ್ ಹಂತದ ಪಂದ್ಯದ ವೇಳೆ ಪಾದದ ಗಾಯದಿಂದ ತಂಡದಿಂದ ಹೊರಗುಳಿಯಲಿದ್ದಾರೆ. ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಆಯ್ಕೆಯಾದ ಆಟಗಾರರಲ್ಲಿ ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ ಮತ್ತು ರಿಂಕು ಸಿಂಗ್ ಅವರಂತಹವರ ಪ್ರದರ್ಶನಗಳನ್ನು ನಿಕಟವಾಗಿ ವೀಕ್ಷಿಸಲಾಗುತ್ತದೆ, 2024ರಲ್ಲಿ T20 ವಿಶ್ವಕಪ್‌ ಹಿನ್ನೆಲೆಯಲ್ಲಿ ಹೊಸ ಮುಖಗಳಿಗೆ ಅವಕಾಶವನ್ನು ನೀಡಲು ಮುಂದಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿ ಹಿರಿಯ ನಾಯಕ- ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲಕುಮಾರ ಮೋದಿ ನಿಧನ

ಬೌಲರ್‌ಗಳಲ್ಲಿ ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶಕುಮಾರ ಮತ್ತು ರವಿ ಬಿಷ್ಣೋಯ್ ಇದ್ದಾರೆ. ಇವರೆಲ್ಲರೂ ಟಿ20ಯಲ್ಲಿ ಸಾಕಷ್ಟು ಅನುಭವ ಹೊಂದಿದ್ದು, ಭಾರತ ಪರ ಆಡಿದ್ದಾರೆ. ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಮತ್ತು ಶಿವಂ ದುಬೆ ತಂಡದಲ್ಲಿರುವ ಆಲ್ ರೌಂಡರ್‌ಗಳು. ಜಿತೇಶ್ ಶರ್ಮಾ ಬ್ಯಾಕ್ ಅಪ್ ವಿಕೆಟ್ ಕೀಪರ್.ಮುಂದಿನ ವರ್ಷದ T20 ವಿಶ್ವಕಪ್‌ ಅನ್ನು ಗಮನದಲ್ಲಿಟ್ಟುಕೊಂಡು ತಂಡವನ್ನು ಆಯ್ಕೆ ಮಾಡಲಾಗಿದೆ.
ಭಾರತ ತಂಡ: ಸೂರ್ಯಕುಮಾರ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (WK), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್. ಶ್ರೇಯಸ್ ಅಯ್ಯರ್ ರಾಯ್‌ಪುರ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಎರಡು ಟಿ20ಐಗಳಿಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement