ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 25ರ ತನಕ ಮಳೆ : ಮುನ್ಸೂಚನೆ

ಬೆಂಗಳೂರು: ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್‌ 25ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆ (Rain)ಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಕೊಡಗು, ರಾಮನಗರ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನವೆಂಬರ್ 20ರಿಂದ 25ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮತ್ತೊಂದೆಡೆ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಸುರಿಯುವ ಸಾಧ್ಯತೆಯಿದೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿನಿನ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement