2ನೇ ಪೋಕ್ಸೋ ಪ್ರಕರಣ: ಮುರುಘಾ ಶರಣರನ್ನು ಮತ್ತೆ ಬಂಧಿಸಿದ ಪೊಲೀಸರು

ದಾವಣಗೆರೆ: ಜಾಮೀನಿನಲ್ಲಿ ಬಿಡುಗಡೆಯಾದ ವಾರದ ಒಳಗೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ (ನವೆಂಬರ್‌ 20)ಪೊಲೀಸರು ಮತ್ತೆ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ದಾವಣಗೆರೆಯ ದೊಡ್ಡಪೇಟೆಯಲ್ಲಿನ ವಿರಕ್ತ ಮಠದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಎರಡನೇ ಪೋಕ್ಸೋ ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿತ್ತು. ಚಿತ್ರದುರ್ಗ ನ್ಯಾಯಾಲಯ ಜಾರಿಗೊಳಿಸಿದ ಅರೆಸ್ಟ್ ವಾರೆಂಟ್‌ ಅನ್ನು ಪಡೆದುಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು, ದಾವಣಗೆರೆಯ ವಿರಕ್ತಮಠದಲ್ಲಿ ಮುರುಘಾ ಶರಣರನ್ನು ಬಂಧಿಸಿದ್ದಾರೆ.

ಮೊದಲ ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ಸೆರೆವಾಸ ಅನುಭವಿಸಿ 4 ದಿನಗಳ ಹಿಂದೆ ನವೆಂಬರ್‌ 16ರಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ 2022ರ ಅಕ್ಟೋಬರ್ 13ರಂದು ಮುರುಘಾ ಶರಣರ ವಿರುದ್ಧ ದಾಖಲಾದ ಎರಡನೇ ಪೋಕ್ಸೋ ಪ್ರಕರಣವನ್ನು ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಅದನ್ನು ವರ್ಗಾವಣೆ ಮಾಡಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ, ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರಂಟ್ ಜಾರಿ ಮಾಡಿತು. ಆದ್ದರಿಂದ ಪೊಲೀಸರು ಅವರನ್ನು ಮತ್ತೆ ಬಂಧಿಸಿದ್ದಾರೆ.

ಪ್ರಮುಖ ಸುದ್ದಿ :-   ವಂಚನೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿನಿಂದ ಚೈತ್ರಾ ಬಿಡುಗಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement