ಗಿಗ್ ಕಾರ್ಮಿಕರಿಗೆ ಯುನಿವರ್ಸಲ್ ಐಡಿ ಕಾರ್ಡ್ ನೀಡುವ ಬಗ್ಗೆ ಚಿಂತನೆ: ಸಚಿವ ಸಂತೋಷ ಲಾಡ್

ಉಡುಪಿ: ಆಹಾರ ವಿತರಣಾ ಆ್ಯಪ್‌ಗಳು ಮತ್ತು ಇ-ಕಾಮರ್ಸ್ ಕಂಪನಿಗಳೊಂದಿಗೆ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೆ ಯುನಿವರ್ಸಲ್ ಐಡಿ ಕಾರ್ಡ್ ನೀಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಗಿಗ್ ಕಾರ್ಯಕರ್ತರ ಕಾರ್ಮಿಕರು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಗಿಗ್ ಕಾರ್ಮಿಕರ ಕುರಿತ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಎಲ್ಲಾ ಗಿಗ್ ಗಿಗ್ ಕಾರ್ಮಿಕರಿಗೆ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಲು ಅವರಿಗೆ ಅವಕಾಶ ನೀಡಲಾಗುತ್ತದೆ. ಈ ಸೌಲಭ್ಯವು ರಾಜ್ಯದ ಸುಮಾರು 4-5 ಲಕ್ಷ ಕಾರ್ಮಿಕರಿಗೆ ಸಹಾಯ ಮಾಡುತ್ತದೆ ಎಂದರು.

ಅಸಂಘಟಿತ ವಲಯದ ವ್ಯಾಪಾರಿಗಳು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ನೌಕರರು, ಟೈಲರ್‌ಗಳು ಮತ್ತು ಇತರ ಎಲ್ಲ ಕಾರ್ಮಿಕರಿಗೆ ಸಹಾಯ ಮಾಡಲು ಸಾರ್ವತ್ರಿಕ ಸಾಮಾಜಿಕ ಭದ್ರತಾ ಮಸೂದೆಯನ್ನು ಪರಿಚಯಿಸಲು ಸರ್ಕಾರ ಯೋಜಿಸಿದೆ. ಸರ್ಕಾರದ ಮುಂದೆ ರಾಜಸ್ಥಾನ ಮಾದರಿ ಮಸೂದೆ ಇದ್ದು, ಅದರ ಕುರಿತು ಚಿಂತನೆ ನಡೆಸಲಾಗುತ್ತಿದೆ. ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಮಸೂದೆ ಮಂಡಿಸುವ ಸಾಧ್ಯತೆಗಳಿವೆ ಎಂದು ತಿಳಿಸಿದರು.
ಕೂಲಿಕಾರರ ಮಕ್ಕಳಿಗೆ ನೀಡುತ್ತಿರುವ ವಿದ್ಯಾರ್ಥಿ ವೇತನದಲ್ಲಿ ಕಡಿತ ಮಾಡಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿದ್ಯಾರ್ಥಿ ವೇತನ ನಾವು ಕಡಿತ ಮಾಡಿಲ್ಲ. 2021 ರಲ್ಲಿ 2,000 ಇದ್ದ ವಿದ್ಯಾರ್ಥಿ ವೇತನ ಎಂಟು ಸಾವಿರಕ್ಕೆ ಏರಿಸಿದರು. 10,000 ನೀಡುವವರಿಗೆ 30,000 ಕೊಟ್ಟರು. ಮೂವತ್ತು ಸಾವಿರ ಕೊಡುವವರಿಗೆ ಒಂದು ಲಕ್ಷ ರೂ. ಕೊಟ್ಟರು. ಇದು ಅವೈಜ್ಞಾನಿಕ ಕ್ರಮವಾಗಿತ್ತು. ಕಳೆದ ಮೂರು ವರ್ಷಗಳಲ್ಲಿ ಏಕಾಏಕಿ 39 ಲಕ್ಷ ಕಾರ್ಡ್ ಬೇಡಿಕೆ ಬಂತು. ನಕಲಿ ಕಾರ್ಡುಗಗಳು ಕಂಡುಬಂದಿವೆ. ಈ ಬಾರಿ 13 ಲಕ್ಷ ಅರ್ಜಿಗಳು ಬಂದಿವೆ. ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ 9 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ, ನಿಜವಾದ ಕಾರ್ಮಿಕರ ಮಕ್ಕಳಿಗೆ ಸರ್ಕಾರದಿಂದ ಸಹಾಯ ಸಿಗಬೇಕು. ಈ ಹಿನ್ನೆಲೆಯಲ್ಲಿ ನಕಲಿ ಕಾರ್ಡ್ ಗಳು ಯಾವುದು ಎಂಬುದನ್ನು ಪತ್ತೆ ಹಚ್ಚುತ್ತೇವೆ. ಅಧಿಕಾರಿಗಳು ಈ ಕೆಲಸ ಮಾಡುತ್ತಿದ್ದಾರೆ ಎಂದರು.

ಪ್ರಮುಖ ಸುದ್ದಿ :-   ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ: ಬಿಜೆಪಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement