ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಸತೀಶ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ: ಸಂಚಲನ ಮೂಡಿಸಿದ ಸವದತ್ತಿ ಶಾಸಕರ ಹೇಳಿಕೆ

ಬೆಳಗಾವಿ: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮುಸುಕಿನ ಗುದ್ದಾಟ ಇನ್ನೂ ನಿಂತಿಲ್ಲ. ಕಾಂಗ್ರೆಸ್‌ ಶಾಸಕರು ತಮ್ಮ ನಾಯಕರು ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳುವುದು ಈಗ ಹೊಸ ಟ್ರೆಂಡ್‌ ಆಗಿ ಪರಿಣಮಿಸಿದೆ. ಈಗ ಮತ್ತೊಬ್ಬ ಕಾಂಗ್ರೆಸ್‌ ಶಾಸಕ ಕೂಡ ಈ ಬಗ್ಗೆ ಮಾತನಾಡಿದ್ದಾರೆ.
ಕಾಂಗ್ರೆಸ್‌ನಲ್ಲಿ ಮತ್ತೆ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಖಡಕ್‌ ಸೂಚನೆ ನೀಡಿರುವ ಮಧ್ಯೆಯೇ ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅವರು ವೇದಿಕೆಯ ಮೇಲೆ ತಮ್ಮ ಭಾಷಣದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾಗುವುದು ಅಷ್ಟೇ ಸತ್ಯ ಎಂದು ಹೇಳುವ ಮೂಲಕ ಮತ್ತೆ ಕಾಂಗ್ರೆಸ್‌ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.
ಯರಗಟ್ಟಿ ಪಟ್ಟಣದಲ್ಲಿ ಮಾತನಾಡಿರುವ ಶಾಸಕ ವಿಶ್ವಾಸ ವೈದ್ಯ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಾತೀತವಾಗಿ ಪ್ರಭಾವ ಬೆಳೆಸಿಕೊಂಡಿರುವ ಸತೀಶ ಅವರು ಮುಂದೆ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಎಂದು ಹೇಳಿದ್ದಾರೆ.

ದೀಪಾವಳಿ ಹಾಗೂ ರಾಜ್ಯೋತ್ಸವ ನಿಮಿತ್ತ ರಸಮಂಜರಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಕಾರ್ಯಕ್ರಮ ಉದ್ಘಾಟಕರಾಗಿ ಭಾಗಿಯಾಗಿದ್ದ ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅವರು ಈ ಹೇಳಿಕೆ ನೀಡಿದ್ದಾರೆ.
ಸಚಿವ ಸತೀಶ ಜಾರಕಿಹೊಳಿ ಹಲವು ಬಾರಿ ನಾನು 2028 ರಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಈ ನಡುವೆ ಸತೀಶ ಜಾರಕಿಹೊಳಿಯವರ ಮೈಸೂರು ಪ್ರವಾಸ, ದುಬೈ ಪ್ರವಾಸಗಳ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿವೆ. ಈ ಮಧ್ಯೆ ಮುಖ್ಯಮಂತ್ರಿ ಹುದ್ದೆ ಕುರಿತು ಚರ್ಚೆಗಳು ತಾರಕಕ್ಕೆ ಏರಿದ ಬೆನ್ನಲ್ಲೇ ಮಧ್ಯಪ್ರವೇಶಿಸಿದ್ದ ಕಾಂಗ್ರೆಸ್ ಹೈಕಮಾಂಡ್ ಈ ಕುರಿತು ಚರ್ಚೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.

ಪ್ರಮುಖ ಸುದ್ದಿ :-   ವಾಲ್ಮೀಕಿ ನಿಗಮ ಹಗರಣ: ಇ.ಡಿ. ಅಧಿಕಾರಿಗಳ ವಿರುದ್ಧದ ಎಫ್​ಐಆರ್​ ಗೆ ಹೈಕೋರ್ಟ್ ತಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement