ಜಾತಿ ಗಣತಿ ವರದಿಗೆ ಡಿಸಿಎಂ ಶಿವಕುಮಾರ ವಿರೋಧ; ವರದಿ ತಿರಸ್ಕರಿಸಬೇಕೆಂದು ಸಿಎಂಗೆ ಒತ್ತಾಯಿಸುವ ಮನವಿಗೆ ಸಹಿ : ಸ್ವೀಕರಿಸುವ ನಿರ್ಧಾರ ಅಚಲ ಎಂದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದ ಒಕ್ಕಲಿಗ ಸಮುದಾಯದ ರಾಜಕೀಯ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ತಮ್ಮ ಮೊದಲ ಅಧಿಕಾರಾವಧಿಯಲ್ಲಿ ನಡೆಸಿದ 2015 ರ ಜಾತಿ ಸಮೀಕ್ಷೆಯ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದ್ದಾರೆ.
ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿಲ್ಲ ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಒಕ್ಕಲಿಗ ನಾಯಕರು ಸಹಿ ಹಾಕಿರುವ ಪತ್ರದಲ್ಲಿ ಹೇಳಲಾಗಿದೆ.
ಸರ್ಕಾರಕ್ಕೆ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಲು ಸಿದ್ಧತೆ ನಡೆಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಮುಖಂಡ ಆರ್‌.ಅಶೋಕ, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಮಾಜಿ ಪ್ರಧಾನಿ ದೇವೇಗೌಡ, ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಒಕ್ಕಲಿಗ ನಾಯಕರು ಪತ್ರಕ್ಕೆ ಸಹಿ ಹಾಕಿದ್ದಾರೆ. .

ಪ್ರತಿ ಮನೆಯಲ್ಲೂ ಜಾತಿ ಲೆಕ್ಕಚಾರ ಸಮೀಕ್ಷೆ ನಡೆಯಬೇಕಿದ್ದು, ಅದು ನಡೆದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದೆಲ್ಲ ಗೊತ್ತಿದ್ದರಿಂದ ಹಿಂದುಳಿದ ವರ್ಗಗಳ ಆಯೋಗದ ಇಬ್ಬರು ಸದಸ್ಯ ಕಾರ್ಯದರ್ಶಿಗಳು ಸಹಿ ಹಾಕಲು ನಿರಾಕರಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಗೊತ್ತುಪಡಿಸಿದ ಸಿಬ್ಬಂದಿಯ ಬದಲಿಗೆ, ವಿದ್ಯಾರ್ಥಿಗಳಿಗೆ ಪ್ರತಿ ತಾಸಿಗೆ ಪಾವತಿಸಿದ ನಾಮಮಾತ್ರದ ಮೊತ್ತದೊಂದಿಗೆ ಸಮೀಕ್ಷೆಯನ್ನು ಕೈಗೊಳ್ಳಲು ತಿಳಿಸಲಾಗಿದೆ ಎಂದು ಅದು ಉಲ್ಲೇಖಿಸಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಈ ತಿಂಗಳು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವ ನಿರೀಕ್ಷೆಯಿದೆ.

ಪ್ರಮುಖ ಸುದ್ದಿ :-   ಹೊಸ ಪ್ರವೃತ್ತಿಯ ಸೈಬರ್ ವಂಚನೆ : ನಕಲಿ ವಿಚಾರಣೆ, ಡೀಪ್‌ಫೇಕ್ ಬಳಕೆ, ಸ್ಕೈಪ್ ಕರೆ, ಡಿಜಿಟಲ್ ಅರೆಸ್ಟ್ ; ವಂಚಕರಿಂದ ಮಹಿಳೆಗೆ 11 ಲಕ್ಷ ರೂ. ಮೋಸ

ವರದಿ ಅಂಗೀಕರಿಸುವ ನಿರ್ಧಾರ ಅಚಲ: ಸಿದ್ದರಾಮಯ್ಯ
ಏತನ್ಮಧ್ಯೆ, ಜಾತಿ ಸಮೀಕ್ಷೆ ವರದಿಯನ್ನು ಅಂಗೀಕರಿಸುವ ಮೂಲಕ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸುವ ಅವರ ನಿರ್ಧಾರವು ಅಚಲವಾಗಿದೆ ಎಂದು ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.
ನಮ್ಮ ಹಿಂದಿನ ಸರ್ಕಾರ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಅಂಗೀಕರಿಸುವ ಮೂಲಕ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸುವ ನನ್ನ ನಿರ್ಧಾರವು ಅಚಲವಾಗಿದೆ ಎಂದು ಹೇಳುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿ ರಾಷ್ಟ್ರಮಟ್ಟದಲ್ಲಿ ಜಾತಿ ಸಮೀಕ್ಷೆ ನಡೆಸುವ ಕುರಿತು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ
ಕಾಂಗ್ರೆಸ್ ಸರ್ಕಾರ 2015 ರಲ್ಲಿ 170 ಕೋಟಿ ರೂ.ವೆಚ್ಚದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಆದರೆ, ಹಿಂದುಳಿದ ವರ್ಗಗಳ ಆಯೋಗ ಇನ್ನೂ ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ. ವರದಿ ಸಲ್ಲಿಕೆಯಾದ ನಂತರ ಅದನ್ನು ಸ್ವೀಕರಿಸಬೇಕೆ ಅಥವಾ ತಿರಸ್ಕರಿಸಬೇಕೆ ಎಂಬುದನ್ನು ಸಂಪುಟ ನಿರ್ಧರಿಸಲಿದೆ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement