ಬೆಂಗಳೂರು : ಬೆಂಗಳೂರು ಹಾಗೂ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಆರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ನವೆಂಬರ್ 23ರ ಬೆಳಗಿನಿಂದ ೨೪ ತಾಸು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ನವೆಂಬರ್ 23 ಹಾಗೂ 24ರಂದು ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಜಿಲ್ಲೆಗಳಲ್ಲಿ ಹಗುವ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಕೆಲವೇ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಂಗಳವಾರದಿಂದಲೇ ಮೋಡಕವಿದ ವಾತಾವರಣವಿತ್ತು, ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ