545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆಗೆ ದಿನಾಂಕ ಪ್ರಕಟ, ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದವರಿಗೂ ಅವಕಾಶ

ಬೆಂಗಳೂರು : ಹೈಕೋರ್ಟ್​ ಆದೇಶ ಹಿನ್ನೆಲೆಯಲ್ಲಿ 545 ಪಿಎಸ್‍ಐಗಳ ನೇಮಕಾತಿ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
545 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಹೊಸದಾಗಿ ಪರೀಕ್ಷೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಇದರ ಬೆನ್ನಲೇ ಡಿಸೆಂಬರ್‌ 23ರಂದು 545 ಪಿಎಸ್‍ಐ (PSI) ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವುದಕ್ಕೆ ಕೆಇಎ(KEA) ಆದೇಶ ನೀಡಿದೆ. ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ.

2021ರ ಜನವರಿ 21ರಂದು ಪೊಲೀಸ್ ಇಲಾಖೆಯಿಂದ 545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಅದೇ ವರ್ಷದ ಅಕ್ಟೋಬರ್ 3 ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಆದರೆ, ಪರೀಕ್ಷೆಯಲ್ಲಿ ಭಾರೀ ಅಕ್ರಮಗಳ ಆರೋಪ ಕೇಳಿ ಬಂದಿತ್ತು. ನಂತರ ಸರ್ಕಾರ ತನಿಖೆಗೆ ಆದೇಶಿಸಿತ್ತು. ನೇಮಕಾತಿ ವಿಭಾಗದ ಎಡಿಜಿಪಿ ಅಮೃತ ಪಾಲ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಅಭ್ಯರ್ಥಿಗಳುಅನೇಕರನ್ನು ತನಿಖಾ ಅಧಿಕಾರಿಗಳು ಬಂಧಿಸಿದ್ದರು.

ಮೇಲ್ನೋಟಕ್ಕೆ ಅಕ್ರಮಗಳು ಕಂಡುಬಂದ ಹಿನ್ನೆಲೆಯಲ್ಲಿ ಅಂದಿನ ಸರ್ಕಾರ ಪರೀಕ್ಷೆಯ ಅಧಿಸೂಚನೆ ರದ್ದುಗೊಳಿಸಿ ಮರು ಪರೀಕ್ಷೆಗೆ ಆದೇಶಿಸಿತ್ತು. ಅದನ್ನು ಕೆಲವು ಅಭ್ಯರ್ಥಿಗಳು ಹೈಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು. ಸುದೀರ್ಘ ವಿಚಾರಣೆ ನಡೆದ ಬಳಿಕ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಮರು ಪರೀಕ್ಷೆಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆಗೆ ಕ್ರಮಗಳನ್ನು ಕೈಗೊಂಡಿದೆ.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

ಪರೀಕ್ಷಾ ಪ್ರಾಧಿಕಾರದ ಪ್ರಕಟಣೆಯ ಪ್ರಕಾರ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆ ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್‍ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement