ಆನೇಕಲ್: ನೀರಿನ ಸಂಪ್ ಸ್ವಚ್ಛತೆ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು : ನೀರಿನ ಸಂಪ್‌ ಸ್ವಚ್ಛ ಮಾಡಲು ಕೆಳಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತ ಮೃತ ಕೂಲಿ ಕಾರ್ಮಿಕರನ್ನು ಬಿಹಾರ ಮೂಲದ ಚಂದನ್‌ ರಾಜವಂಶಿ (29) ಮತ್ತು ಪಿಂಟು ರಾಜವಂಶಿ (21) ಎಂದು ಗುರುತಿಸಲಾಗಿದೆ. ಇವರು ಬಿಹಾರ ಮೂಲದವರಾಗಿದ್ದು, ಇಬ್ಬರು ಸಹೋದರರು ಎನ್ನಲಾಗಿದೆ. ಬುಧವಾರ ಸಂಜೆ ನೀರಿನ ಸಂಪ್‌ ಸ್ವಚ್ಛಗೊಳಿಸಲು ಕೆಳಗೆ ಇಳಿದಿದ್ದ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಹಾಗೂ ಅಸ್ವಸ್ಥಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿರುಪಾಳ್ಯ ಗ್ರಾಮದಲ್ಲಿ ಶ್ರೀನಿವಾಸ ರೆಡ್ಡಿ ಎಂಬವರಿಗೆ ಸೇರಿದ ಸನ್​ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ಇಬ್ಬರು ಕಾರ್ಮಿಕರು ಆ್ಯಸಿಡ್ ಹಾಕಿ ನೀರಿನ ಸಂಪ್ ಸ್ವಚ್ಛ ಮಾಡುತ್ತಿದ್ದರು. ಸಂಪ್ ಸ್ವಚ್ಛ ಮಾಡುವ ವೇಳೆ, ಇಬ್ಬರು ಕಾರ್ಮಿಕರು ಉಸಿರುಗಟ್ಟಿ ನೀರಿನ ಸಂಪ್​ನಲ್ಲೇ ಮೃತಪಟ್ಟಿದ್ದಾರೆ. ಇವರನ್ನು ಉಳಿಸಲು ಮುಂದಾಗಿದ್ದ ಕಂಪನಿ ಮಾಲೀಕ ಶ್ರೀನಿವಾಸರೆಡ್ಡಿ ಮತ್ತು ಕಾರ್ಮಿಕ ಜಗದೀಶ ಕೂಡ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಉಳಿದ ಕಾರ್ಮಿಕರು ಈ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಬ್ಬಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement