ಡಿ.ಕೆ. ಶಿವಕುಮಾರ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ….!

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಒಡೆತನದ ಅಕ್ರಮ ಆಸ್ತಿಯನ್ನು ಪರಿಶೀಲಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿರುವ ಪ್ರಕರಣವನ್ನು ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ತನಿಖೆಯನ್ನು ರಾಜ್ಯ ಪೊಲೀಸ್ ಅಥವಾ ಭ್ರಷ್ಟಾಚಾರ ನಿಗ್ರಹ ಪ್ರಾಧಿಕಾರವಾದ ಲೋಕಾಯುಕ್ತಕ್ಕೆ ವಹಿಸುವಂತೆ ಗೃಹ ಇಲಾಖೆ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟದ ಮುಂದೆ ಇಡಲಾಗಿದೆ ಎಂದು ಅದು ಹೇಳಿದೆ. ಈ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನ್ಯಾಯಾಲಯದ ಮೊರೆ ಹೋಗಲಿದೆ ಎಂದು ಹೇಳಲಾಗಿದೆ.
ಅಕ್ರಮ ಆಸ್ತಿ ಪ್ರಕರಣದ (Disproportionate Assets Case) ತನಿಖೆಯನ್ನು ಸಿಬಿಐಗೆ ವಹಿಸಿ 2019ರಲ್ಲಿ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶ ಹಿಂಪಡೆಯಲು ಇದೀಗ ಗೃಹ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಈ ಕುರಿತು ಗೃಹ ಇಲಾಖೆಯು ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಂದ ಅಭಿಪ್ರಾಯವನ್ನೂ ಪಡೆದಿದೆ. 28 ಪುಟಗಳ ಅಭಿಪ್ರಾಯ ನೀಡಿರುವ ಅಡ್ವೋಕೇಟ್ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಆದೇಶವನ್ನು ವಾಪಸ್ ಪಡೆದು, ಅದನ್ನು ಪೊಲೀಸ್ ಇಲಾಖೆ ಅಥವಾ ಲೋಕಾಯುಕ್ತಕ್ಕೆ ವಹಿಸಬಹುದು ಎಂದು ಅಭಿಪ್ರಾಯ ನೀಡಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

ಪ್ರಕರಣ ಏನು..?
2017ರಲ್ಲಿ ಡಿ.ಕೆ ಶಿವಕುಮಾರ ವಾಸ್ತವ್ಯವಿದ್ದ ಈಗಲ್‍ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ ಶಿವಕುಮಾರ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. ಇದೇ ಪ್ರಕರಣದಲ್ಲಿ ಇಡಿ ಡಿ.ಕೆ ಶಿವಕುಮಾರ ಅವರನ್ನು ಬಂಧಿಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ. 25ರಂದು ಅನುಮತಿ ನೀಡಿದ ನಂತರ 2020ರ ಅಕ್ಟೋಬರ್ 3 ರಂದು ಶಿವಕುಮಾರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.
ಶಿವಕುಮಾರ್ ನಂತರ ಯಡಿಯೂರಪ್ಪ ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಮನವಿ ಮಾಡಿದರು; ಆದಾಗ್ಯೂ, ನ್ಯಾಯಾಲಯವು ಈ ವರ್ಷದ ಏಪ್ರಿಲ್‌ನಲ್ಲಿ ಅವರ ಮನವಿ ಅರ್ಜಿಯನ್ನು ವಜಾಗೊಳಿಸಿತು.
ಸಿಬಿಐ ತನ್ನ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿರುವುದರಿಂದ ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ವರದಿ ನೀಡಲು ಸಿಬಿಐಗೆ ಜನವರಿ ಮಧ್ಯದವರೆಗೆ ಮೂರು ತಿಂಗಳ ಕಾಲಾವಕಾಶ ನೀಡಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

 

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement