ರಮೇಶ ಜಾರಕಿಹೊಳಿ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ : ಅಸಮಾಧಾನ ಶಮನಕ್ಕೆ ಯತ್ನ

ಬೆಂಗಳೂರು :ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೆಂಗಳೂರಿನಲ್ಲಿ ಇಂದು, ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬೆಂಗಳೂರು ಸದಾಶಿವನಗರದ ರಮೇಶ ಜಾರಕಿಹೊಳಿ ಅವರ ನಿವಾಸಕ್ಕೆ ಆಗಮಿಸಿದ ವಿಜಯೇಂದ್ರ ಅವರು ರಾಜ್ಯಾದ್ಯಂತ ಪಕ್ಷ ಸಂಘಟಿಸಲು ಸಹಕಾರ ನೀಡುವಂತೆ ಕೇಳಿಕೊಂಡರು.
ರಮೇಶ ಜಾರಕಿಹೊಳಿ ಅವರ ಭೇಟಿ ನಂತರ ಮಾಧ್ಯಮದವರ ಜೊತೆ ಮಾತನಾಡಿದ ವಿಜಯೇಂದ್ರ ಅವರು, ನಾನು ಬಿಜೆಪಿ ರಾಜ್ಯಾಧ್ಯಕ್ಷನಾದ ಮೇಲೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಜವಾಬ್ದಾರಿಯಾಗಿದೆ. ಈ ಮಾತನ್ನು ನಾನು ಪದೇ ಪದೇ ಹೇಳುತ್ತಿದ್ದೇನೆ. ಜಾರಕಿಹೊಳಿಯವರು ತಮ್ಮ ನೋವನ್ನು ಇಂದಿನ ಭೇಟಿಯ 30 ನಿಮಿಷಗಳ ವೇಳೆ ತೋಡಿಕೊಂಡಿದ್ದಾರೆ. ಕೆಲವು ಅಭಿಪ್ರಾಯಗಳನ್ನು ಹೇಳಿದ್ದಾರೆ. ನಾನು, ರಾಷ್ಟ್ರೀಯ ನಾಯಕರು ನನಗೆ ಜವಾಬ್ದಾರಿ ನೀಡಿ ಪಕ್ಷ ಕಟ್ಟಲು ಹೇಳಿರುವುದನ್ನು ಅವರಿಗೆ ವಿವರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಜಾರಕಿಹೊಳಿಯವರು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಪಕ್ಷಕ್ಕಾಗಿ ಕೆಲಸ ಮಾಡುವ ಭರವಸೆ ನೀಡಿರುವುದಾಗಿ ವಿಜಯೇಂದ್ರ ಸ್ಪಷ್ಟಪಡಿಸಿದರು.
ಪಕ್ಷದ ವರಿಷ್ಠರು ವಹಿಸಿದ ಜವಾಬ್ದಾರಿಯಂತೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಿ ಪಕ್ಷ ಕಟ್ಟುವುದಕ್ಕೆ ನನ್ನ ಆದ್ಯತೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement