ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯಲು ಕ್ಯಾಬಿನೆಟ್ ತೀರ್ಮಾನ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ರದ್ದು ಮಾಡುವ ಪ್ರಸ್ತಾವೆನೆಗೆ ರಾಜ್ಯ ಸಚಿವ ಸಂಪುಟದ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿ ನವೆಂಬರ್‌ ೨೫ರಂದು ಬಿಜೆಪಿ ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದರು, ಮಾಜಿ ಸಚಿವರು, ಶಾಸಕರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸರಕಾರದ ಕಾನೂನುಬಾಹಿರ ಹಾಗೂ ತಪ್ಪು ನಿರ್ಧಾರವನ್ನು ಖಂಡಿಸಿ ಈ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದೆ.

ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಕಾನೂನು ಬಾಹಿರ : ಬಿಜೆಪಿ
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಡಿ.ಕೆ.ಶಿವಕುಮಾರ ಅವರಿಗೆ ತಾವು ಸತ್ಯಹರಿಶ್ಚಂದ್ರ ಅಂತ ಸಾಬೀತು ಮಾಡುವ ಅವಕಾಶ ಇದೆ. ನೀವು ತಪ್ಪು ಮಾಡಿಲ್ಲ ಎಂದಾದರೆ ತನಿಖೆ ಎದುರಿಸಿ ತೋರಿಸಿ. ನಮ್ಮ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರ ರಾಜಕೀಯ ಪ್ರೇರಿತವಲ್ಲ. ಪ್ರಾಥಮಿಕ ತನಿಖೆ ಮಾಹಿತಿ ಆಧರಿಸಿ ಸಿಬಿಐ ತನಿಖೆಗೆ ಕೊಡಲಾಗಿತ್ತು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಬೆಂಗಳೂರು: ನಟ ಚೇತನ್ ಚಂದ್ರ ಮೇಲೆ ಹಲ್ಲೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement