ಬೆಳಗಾವಿ ದಂಡು ಮಂಡಳಿ ಸಿಇಒ ಆತ್ಮಹತ್ಯೆ

ಬೆಳಗಾವಿ : ಬೆಳಗಾವಿ ದಂಡು ಮಂಡಳಿಯ ಸಿಇಒ ಕೆ.ಆನಂದ (40) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಬೆಳಗಾವಿಯ ಕ್ಯಾಂಪ್ ಪ್ರದೇಶದ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಬೆಳಗಾವಿ ದಂಡು ಮಂಡಳಿಯಲ್ಲಿ ಒಂದೂವರೆ ವರ್ಷಗಳಿಂದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಆನಂದ ಅವರು ಮೂಲತಃ ತಮಿಳುನಾಡಿನವರು. ಇಂದು, ಶನಿವಾರ ಅವರ ಮನೆ ಬಾಗಿಲು ತೆಗೆಯದೇ ಇದ್ದಾಗ ಸಿಬ್ಬಂದಿ ಕ್ಯಾಂಪ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಆನಂದ ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ.ಅವರು ಒಂಟಿಯಾಗಿ ವಾಸವಾಗಿದ್ದರು ಎಂದು ಹೇಳಲಾಗಿದೆ.  ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ
2019ರ ಉದ್ಯೋಗಿಗಳ ನೇಮಕಾತಿಯಲ್ಲಿ ದಂಡು ಮಂಡಳಿ (Belagavi Cantonment Board)ಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಮೇರೆಗೆ ವಾರದ ಹಿಂದೆ ಸಿಬಿಐ ಅಧಿಕಾರಿಗಳು ದಂಡು ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿದ್ದರು. ಇದರ ಬೆನ್ನಿಗೆ ಈಗ ಸಿಇಒ ಆನಂದ್ ಆತ್ಮಹತ್ಯೆ ಚರ್ಚೆಗೆ ಗ್ರಾಸವಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement