ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರಕ್ಕೆ ಖಿನ್ನತೆಗೊಳಗಾದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪ್ಯದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಸಂಪ್ಯ ಬೈಲಾಡಿ ನಿವಾಸಿ ಪುತ್ರಿ ನಿಶಾ (17) ಎಂಬವರು ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ ಒಂದು ವಾರದ ಹಿಂದೆ ವಿಷ ಸೇವಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನಿಶಾ ಅವರು ಪುತ್ತೂರು ನಗರದ ಖಾಸಗಿ ಕಾಲೇಜಿನಲ್ಲಿ ಪಿಯು ಪ್ರಥಮ ವರ್ಷದ ವಿದ್ಯಾಭ್ಯಾಸ ಮಾಡುತ್ತಿದ್ದು, ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ (ಓಟ ಸ್ಪರ್ಧೆ) ಭಾಗವಹಿಸಿದ್ದರು. ರನ್ನಿಂಗ್ ರೇಸ್‌ನಲ್ಲಿ ಭಾಗವಹಿಸಿದ್ದ ಅವರು ಯಾವುದೇ ಬಹುಮಾನ ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.

ಮನೆಗೆ ವಾಪಸ್‌ ಆದ ನಂತರವೂ ಬೇಸರದಲ್ಲಿದ್ದು ಅವರು ನ.14 ರಂದು ವಿಪರೀತವಾಗಿ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದರು ಎನ್ನಲಾಗಿದೆ. ಈ ಬಗ್ಗೆ ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕ ಸೇವಿಸಿರುವುದಾಗಿ ಬೆಳಕಿಗೆ ಬಂದಿದೆ. ವಿಚಾರ ತಿಳಿದ ಕೂಡಲೇ ಮನೆಯವರು ಆಕೆಯನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ಸೂಚಿಸಿದ್ದರಿಂದ ಮಂಗಳೂರಿಗೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದರು. ನ.25 ರಂದು ಚಿಕಿತ್ಸೆ ಫಲಕಾರಿಯಾಗದೇ ನಿಶಾ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ನಿಶಾ ಅವರ ಸಹೋದರ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

 

.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement