ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ರಕ್ಷಿಸಿದ ಕ್ರಿಕೆಟಿಗ ಮೊಹಮ್ಮದ್ ಶಮಿ

ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಭಾರತೀಯರ ಮನಗೆದ್ದಿದ್ದ ವೇಗಿ ಮೊಹಮ್ಮದ್ ಶಮಿ ನೈನಿತಾಲ್‌ನಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯನ್ನು ಕಾಪಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಶಮಿ ಶನಿವಾರ ತಡರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ವೀಡಿಯೊ ಹಂಚಿಕೊಂಡಿದ್ದಾರೆ. ತಾನು ಮತ್ತು ತನ್ನ ಜೊತೆಗಿದ್ದ ಕೆಲವರು ಜೊತೆಗೂಡಿ ಬೆಟ್ಟದಲ್ಲಿ ಕೆಳಗಿಳಿದು ಅಪಘಾತದಲ್ಲಿ ಬೆಟ್ಟದಿಂದ ಕೆಳಗೆ ಬಿದ್ದಿದ್ದ ಕಾರಿನ ಬಳಿಗೆ ವ್ಯಕ್ತಿಯನ್ನು ಕಾರಿನಿಂದ ಹೊರತಂದು ಕಾಪಾಡಿದ್ದೇವೆ ಎಂದು ಶಮಿ ಹೇಳಿಕೊಂಡಿದ್ದಾರೆ.
ಘಟನೆ ನಡೆದಾಗ ಭಾರತ ಕ್ರಿಕೆಟ್‌ ತಂಡದ ವೇಗಿ ಶಮಿ ಕೂಡ ನೈನಿತಾಲ್‌ನಲ್ಲಿದ್ದರು. ಶಮಿ ಅವರ ವಾಹನದ ಮುಂದೆಯೇ ವ್ಯಕ್ತಿಯ ಕಾರು ಬೆಟ್ಟದಿಂದ ಬಿದ್ದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸಮಯಕ್ಕೆ ಸರಿಯಾಗಿ ಪ್ರತಿಕ್ರಿಯಿಸಿದ ಮೊಹಮ್ಮದ್ ಶಮಿ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಶಮಿ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಹಾಗೂ “ಆತ ತುಂಬಾ ಅದೃಷ್ಟಶಾಲಿ ದೇವರು ಅವನಿಗೆ 2 ನೇ ಜೀವನವನ್ನು ಕೊಟ್ಟನು. ಅವನ ಕಾರು ನನ್ನ ಕಾರಿನ ಮುಂದೆ ನೈನಿತಾಲ್ ಬಳಿಯ ಗುಡ್ಡದ ರಸ್ತೆಯಿಂದ ಕೆಳಗೆ ಬಿದ್ದಿದೆ. ನಾವು ಅವನನ್ನು ಸುರಕ್ಷಿತವಾಗಿ ಹೊರತೆಗೆದಿದ್ದೇವೆ.” ಎಂದು ಬರೆದಿದ್ದಾರೆ.

ಪ್ರಮುಖ ಸುದ್ದಿ :-   ವಿಶ್ವದಾದ್ಯಂತ ಕೋವಿಡ್ ಲಸಿಕೆ ಹಿಂತೆಗೆದುಕೊಂಡ ಆಸ್ಟ್ರಾಜೆನೆಕಾ : ವರದಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement