ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು : ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಚುರುಕು ಪಡೆದಿದೆ. ಇಂದಿನಿಂದ (ನವೆಂಬರ್‌ 26) ಡಿಸೆಂಬರ್‌ 2ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಭಾನುವಾರ ಸಂಜೆ ವೇಳೆಗೆ ಬೆಂಗಳೂರು ನಗರದ ಹಲವೆಡೆ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳ ಅನೇಕ ಪ್ರದೇಶಗಳಲ್ಲಿ ಡಿಸೆಂಬರ್ 2ರವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣೆ ಮಳೆಯಾಗಲಿದೆ.
ಅಲ್ಲದೆ,  ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ವಿಜಯನಗರದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಶನಿವಾರ (ನವೆಂಬರ್‌ 25) ಉಡುಪಿ, ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ, ಮಧುಗಿರಿಯಲ್ಲಿ ಮಳೆ ಆಗಿದೆ. ಬೆಂಗಳೂರಿನಲ್ಲಿ ಶನಿವಾರ ಕೆಲವೆಡೆ ಮಳೆ ಆಗಿದೆ. ಇಂದು (ನವೆಂಬರ್‌ 26) ಕೂಡ ಮೋಡ ಮುಸುಕಿದ ವಾತಾವರಣ ನಿರ್ಮಾಣ ಆಗಲಿದ್ದು, ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement