ಅಯ್ಯೋ ರಾಮಾ….: 4ನೇ ತರಗತಿ ವಿದ್ಯಾರ್ಥಿಗೆ ಜ್ಯಾಮಿತಿ ಕಂಪಾಸ್‌ ನಿಂದ 108 ಬಾರಿ ಇರಿದ ಸಹಪಾಠಿಗಳು…!

ಇಂದೋರ್‌ :ಮಧ್ಯಪ್ರದೇಶದ ಇಂದೋರ್‌ನಲ್ಲಿ 4 ನೇ ತರಗತಿಯ ವಿದ್ಯಾರ್ಥಿಗೆ ತನ್ನ ಸಹಪಾಠಿಗಳು 108 ಬಾರಿ ಇರಿದಿರುವ ಭಯಾನಕ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಕ್ಕಳ ಕಲ್ಯಾಣ ಸಮಿತಿಯು (ಸಿಡಬ್ಲ್ಯುಸಿ) ಘಟನೆಯ ಬಗ್ಗೆ ಗಮನಹರಿಸಿದೆ ಮತ್ತು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದೆ. ನವೆಂಬರ್ 24 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ ಜಗಳದಲ್ಲಿ ವಿದ್ಯಾರ್ಥಿಯ ಮೇಲೆ ಸಹಪಾಠಿಗಳು ಜ್ಯಾಮಿತಿ ಕಂಪಾಸ್‌ನಿಂದ 108 ಬಾರಿ ಇರಿದ ಆಘಾತಕಾರಿ ಘಟನೆ ನಡೆದಿದೆ ಎಂದು ಸಿಡಬ್ಲ್ಯೂಸಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್ ಹೇಳಿದ್ದಾರೆ.
“ಪ್ರಕರಣ ಆಘಾತಕಾರಿಯಾಗಿದೆ. ಇಷ್ಟು ಚಿಕ್ಕ ವಯಸ್ಸಿನ ಮಕ್ಕಳ ಹಿಂಸಾತ್ಮಕ ವರ್ತನೆಗೆ ಕಾರಣವನ್ನು ಕಂಡುಹಿಡಿಯಲು ನಾವು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದ್ದೇವೆ ಎಂದು ಅವರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯುಸಿ)ಯು ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಲಹೆ ನೀಡಲಿದೆ ಮತ್ತು ಮಕ್ಕಳು ಹಿಂಸಾತ್ಮಕ ದೃಶ್ಯಗಳನ್ನು ಒಳಗೊಂಡಿರುವ ವೀಡಿಯೊ ಗೇಮ್‌ಗಳನ್ನು ಆಡುತ್ತಾರೆಯೇ ಎಂದು ಪತ್ತೆ ಮಾಡಬೇಕಿದೆ ಎಂದು ಪೋರ್ವಾಲ್ ಹೇಳಿದರು.

ಪ್ರಮುಖ ಸುದ್ದಿ :-   ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀ ರಾಮ, ಕ್ರಿಕೆಟ್‌ ಆಟಗಾರರ ಹೆಸರು ಬರೆದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣ ; ಇಬ್ಬರು ಪ್ರಾಧ್ಯಾಪಕರು ಅಮಾನತು

ನವೆಂಬರ್ 24 ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಶಾಲೆಯಲ್ಲಿ ನಡೆದ ಹಲ್ಲೆಯಿಂದ ಬಾಲಕ ಹೆದರಿದ್ದಾನೆ ಎಂದು ಬಾಲಕನ ತಂದೆ ಆರೋಪಿಸಿದ್ದಾರೆ. “ನನ್ನ ಮಗ ಮನೆಗೆ ಹಿಂದಿರುಗಿದ ನಂತರ ಈ ಘಟನೆಯನ್ನು ವಿವರಿಸಿದ್ದಾನೆ. ಅವನ ಸಹಪಾಠಿಗಳು ಏಕೆ ಹಿಂಸಾತ್ಮಕವಾಗಿ ನಡೆದುಕೊಂಡರು ಎಂದು ನನಗೆ ಇನ್ನೂ ತಿಳಿದಿಲ್ಲ. ಶಾಲೆಯ ಆಡಳಿತ ಮಂಡಳಿ ತರಗತಿಯ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುತ್ತಿಲ್ಲ’ ಎಂದು ಅವರು ಹೇಳಿದರು.

ಘಟನೆಯ ಬಗ್ಗೆ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ನೀಡಿದ ನಂತರ ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಮಕ್ಕಳು 10 ವರ್ಷದೊಳಗಿನವರಾಗಿದ್ದು, ಕಾನೂನು ನಿಬಂಧನೆಗಳ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement