ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ತಿರುಪತಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ತಿರುಪತಿ ತಿರುಮಲದಲ್ಲಿರುವ ಪ್ರಸಿದ್ಧ ವೆಂಕಟೇಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಬೆಟ್ಟದ ಮೇಲಿರುವ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಎಲ್ಲಾ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಪ್ರಧಾನಿ ದೇವಸ್ಥಾನಕ್ಕೆ ಭೇಟಿ ನೀಡಿದರು. “ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ, 140 ಕೋಟಿ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಲಾಗಿದೆ” ಎಂದು ಮೋದಿ ಅವರು ‘X’ ನಲ್ಲಿ ತಿಳಿಸಿದ್ದಾರೆ.

ಭಾನುವಾರ ರಾತ್ರಿಯೇ ಪ್ರಧಾನಿ ತಿರುಮಲಕ್ಕೆ ಆಗಮಿಸಿದ್ದರು. ಆಂಧ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ರೆನಿಗಿಂಟಾ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡರು. ದೇವಾಲಯ ದರ್ಶನದ ನಂತರ ಪ್ರಧಾನಿ ತೆಲಂಗಾಣಕ್ಕೆ ತೆರಳಲಿದ್ದಾರೆ.

ತೆಲಂಗಾಣದ 119 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 30 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರ ಬೀಳಲಿದೆ. ತೆಲಂಗಾಣಕ್ಕೂ ಮುನ್ನ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಗೆ ಮತದಾನ ನಡೆದಿದೆ.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement