ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

ತುಮಕೂರು: ಇಲ್ಲಿನ ಸದಾಶಿವನಗರದಲ್ಲಿ ಒಂದೇ ಕುಟುಂಬದ ಐವರು ಭಾನವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಕ್ಕಪಕ್ಕದ ಮನೆಯವರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಮೃತರನ್ನು ಗರೀಬ್‌ಸಾಬ್‌ (36), ಸುಮಯಾ (೩೨), ಹಾಜೀರಾ ( 14) , ಮಹ್ಮಮದ್ ಶುಭಾನ್ (10) ಮಹ್ಮದ್ ಮುನೀರ್ ( 8) ಎಂದು ಗುರುತಿಸಲಾಗಿದೆ.
ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ನಿವಾಸಿಗಳಾಗಿದ್ದ ಇವರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಗರಕ್ಕೆ ಆಗಮಿಸಿದ್ದ ಇವರು ಸದಾಶಿವನಗರದಲ್ಲಿ ಕಬಾಬ್‌ ಅಂಗಡಿ ನಡೆಸುತ್ತಿದ್ದರು. ‘ಕೆಳಗಡೆ ಬಾಡಿಗೆಗೆ ಇದ್ದವರು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಅವರೇ ನಮ್ಮ ಸಾವಿಗೆ ಕಾರಣ ಎಂದು’ ಡೆತ್‌ ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
.

ಆತ್ಮಹತ್ಯೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಬೇಕು. ನಾವು ವಾಸಿಸುವ ಮನೆಯ ಕೆಳಗಿನವರು ನಮಗೆ ತುಂಬಾ ಕಾಟ ಕೊಟ್ಟಿದ್ದಾರೆ. ಅಕ್ಕಪಕ್ಕದ ಮನೆಯವರು ದೌರ್ಜನ್ಯ ನೀಡುತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ. ನಮಗೆ ಸಾಲ ಹೆಚ್ಚಾಗಿದೆ. ವ್ಯಾಪಾರದಲ್ಲಿ ಲಾಭ ಇಲ್ಲ. ಕೆಲಸಕ್ಕೆ ಹೋದರೆ ಹಣ ಬರುತ್ತಿಲ್ಲ. ಹೀಗಾಗಿ ಸಂಸಾರ ಮಾಡುವುದು ಕಷ್ಟವಾಗಿದೆ. ಇಲ್ಲಿ ಸಾಲ ಕಟ್ಟೋದು ಹೆಚ್ಚಾಗಿದೆ. ಬಾಡಿಗೆ ಮನೆಗೆ ನಲವತ್ತೈದು ಸಾವಿರ ಅಡ್ವಾನ್ಸ್ ಕೊಟ್ಟಿದ್ದೀವಿ. ಮೂರು ತಿಂಗಳ ಬಾಡಿಗೆ ಕೊಡೋದು ಬಾಕಿಯಿದೆ. ಉಳಿದ ಹಣವನ್ನ ನಮ್ಮ ದೊಡ್ಡಮ್ಮನಿಗೆ ವಾಪಸ್‌ ಕೊಡಿಎಂದು ಬರೆದಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ

ಇಬ್ಬರ ದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಇದ್ದವು. ಮೂವರು ಮಕ್ಕಳ ಮೃತ ದೇಹ ಹಾಸಿಗೆಯಲ್ಲಿವೆ. ಮೃತರು ಶಿರಾ ತಾಲೂಕು ಲಕ್ಕನಹಳ್ಳಿಯವರು. ಸಾಯುವ ಮುನ್ನ ಸಂಬಂಧಿಕರಿಗೆ ವೀಡಿಯೊ ಮೆಸೇಜ್ ಕಳುಹಿಸಿದ್ದು, ಅದರಲ್ಲಿ ಏನು ಮಾಹಿತಿಯಿದೆ ಎಂಬುದನ್ನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ’ ಎಂದು ತುಮಕೂರು ಎಸ್ಪಿ ಅಶೋಕ್ ಕೆ. ವಿ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಭೇಟಿ ನೀಡಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement