ಡಿಕೆಶಿ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮೋದನೆ ವಾಪಸ್‌ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (D.K.Shivakumar) ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದ ಅನುಮೋದನೆಯನ್ನು ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಡಿ.ಕೆ.ಶಿವಕುಮಾರ ಅವರನ್ನು ತನಿಖೆಯಿಂದ ರಕ್ಷಿಸಲು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಆಕ್ಷೇಪಿಸಿ ಯತ್ನಾಳ ಅವರು ಕರ್ನಾಟಕ ಹೈಕೋರ್ಟ್‌ ಮಧ್ಯಪ್ರವೇಶಿಕೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಶಿವಕುಮಾರ ಅವರು ಅರ್ಜಿಯನ್ನು ವಜಾ ಮಾಡಿರುವ ಆದೇಶದಲ್ಲಿ ಏಕಸದಸ್ಯ ಪೀಠವು ಸಿಬಿಐ ಶೇ.90ರಷ್ಟು ತನಿಖೆ ಪೂರ್ಣಗೊಳಿಸಿದೆ ಎಂದು ಉಲ್ಲೇಖಿಸಿದೆ. ಈ ಹಂತದಲ್ಲಿ ಸಿಬಿಐಗೆ ನೀಡಿರುವ ಅನುಮೋದನೆ ಹಿಂಪಡೆಯುವ ಮೂಲಕ ಪ್ರಕ್ರಿಯೆಯಲ್ಲಿ ಹಾಲಿ ಸರ್ಕಾರ ಮಧ್ಯಪ್ರವೇಶ ಮಾಡಲು ಮುಂದಾಗಿದೆ. ರಾಜ್ಯ ಸರ್ಕಾರದ ನಿರ್ಧಾರವು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ದುರುದ್ದೇಶದಿಂದ ರಾಜ್ಯ ಸರ್ಕಾರ ತೀರ್ಮಾನ ಮಾಡಿ ಶಿವಕುಮಾರ ಅವರನ್ನು ರಕ್ಷಿಸಲು ಮುಂದಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು...

ಡಿ.ಕೆ.ಶಿವಕುಮಾರ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸಿಬಿಐ ತನಿಖೆಗೆ ವಹಿಸಿ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲು ನಿರ್ಧರಿಸಿತು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement