ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ರೆ ಪಿಐಎಲ್‌ ಸಲ್ಲಿಕೆ : ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ

ಬೆಳಗಾವಿ : ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡುವ ಸಂಪ್ರದಾಯ ನಿಲ್ಲಿಸಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗುವುದು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಯಾವುದೇ ಯಾವ ನಿಯಮಗಳಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಲ್ಲೂ ದಾಖಲೆ ಇಲ್ಲ. ಆದರೆ ಈಗ ಮುಖ್ಯಮಂತ್ರಿಗಳು ಸೂಚಿಸಿದವರಿಗೆ ಸಂಪುಟ ದರ್ಜೆ ಸ್ಥಾನಮಾನ ಕೊಡಲಾಗುವುದು ಎಂದು ಶಿಷ್ಟಾಚಾರ ಇಲಾಖೆ ಅಧಿಕಾರಿಗಳು ಮೌಖಿಕವಾಗಿ ಹೇಳುತ್ತಿದ್ದಾರೆ. ನಿಯಮಾವಳಿಯಲ್ಲಿ ಅವಕಾಶವೇ ಇಲ್ಲದಿದ್ದರೆ ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ಹೇಗೆ ಕೊಡುತ್ತಾರೆ ಎಂದು ಅವರು ಪ್ರಶ್ನಿಸಿದರು.

ಗಮ ಮಂಡಳಿಗಳಿಗೆ ಬರುವ ಕೆಲಸಗಳಿಗೆ ಪ್ರತ್ಯೇಕ ಇಲಾಖೆಗಳಿವೆ. ಐಎಎಸ್ ಅಧಿಕಾರಿಗಳು ಅವುಗಳಿಗೆ ಪ್ರಧಾನ ಕಾರ್ಯದರ್ಶಿಗಳಾಗಿರುತ್ತಾರೆ. ಆಯಾ ಇಲಾಖೆಗೆ ಸಚಿವರು ಸಹ ಇದ್ದಾರೆ. ಆದರೆ, ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಕೊಟ್ಟು ಸಾರ್ವಜನಿಕರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವುದು ಸರಿಯಲ್ಲ. ಶಾಸಕರ ಸಂಖ್ಯಾಬಲಕ್ಕೆ ಅನುಗುಣವಾಗಿ ಶೇ.15ರಷ್ಟು ಜನಪ್ರತಿನಿಧಿಗಳಿಗೆ ಸಚಿವರಾಗಲು ಸಂವಿಧಾನದ ತಿದ್ದುಪಡಿಯಲ್ಲಿ ಅವಕಾಶವಿದೆ. ಆದರೆ ಅದಕ್ಕಿಂತಲೂ ಹೆಚ್ಚಿನ ಜನಪ್ರತಿನಿಧಿಗಳಿಗೆ ಸಂಪುಟ ದರ್ಜೆ ಸ್ಥಾನಮಾನ ಕೊಡಲು ಅವಕಾಶವಿಲ್ಲ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ರಾಜ್ಯದ ಈ ಜಿಲ್ಲೆಗಳಲ್ಲಿ 6-7 ದಿನ ಮಳೆ ಸಾಧ್ಯತೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement