ಮಧ್ಯರಾತ್ರಿ ಸೆರೆಯಾಯ್ತು ನರ ಭಕ್ಷಕ ಹುಲಿ….

ಮೈಸೂರು: ಬಂಡೀಪುರ ಭಾಗದಲ್ಲಿ ಮಹಿಳೆ ಸಾವಿಗೆ ಕಾರಣವಾಗಿದ್ದ ಭಾರೀ ಗಾತ್ರದ ನರಭಕ್ಷಕ ಹುಲಿಯನ್ನು ಮಧ್ಯರಾತ್ರಿ ವೇಳೆ ನಡೆಸಿದ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ.
10 ವರ್ಷದ ಗಂಡು ಹುಲಿ ಇದಾಗಿದ್ದು, ಎರಡು ದಿನದ ಹಿಂದೆ ಹಸುವೊಂದನ್ನು ಕೊಂದು ಹಾಕಿದ್ದ ನಂಜನಗೂಡು ತಾಲ್ಲೂಕು ಬಳ್ಳೂರು ಹುಂಡಿಯಲ್ಲಿಯೇ ಜಾಗದಲ್ಲಿಯೇ ಸೆರೆ ಹಿಡಿಯಲಾಗಿದೆ. ಸೋಮವಾರ ಮಧ್ಯರಾತ್ರಿ 1: 45ರ ಹೊತ್ತಿಗೆ ಹುಲಿ ಅಲ್ಲಿಗೆ ಬಂದಾಗ ಅರವಳಿಕೆ ನೀಡಿ ಅದನ್ನು ಸೆರೆ ಹಿಡಿಯಲಾಯಿತು. ಆನಂತರ ಅದನ್ನು ಮೈಸೂರು ಮೃಗಾಲಯಕ್ಕೆ ತರಲಾಗಿದೆ.
ಬಳ್ಳೂರು ಹುಂಡಿ ಬಳಿ ದನ ಮೇಯಿಸಲು ಹೋಗದ್ದ ರತ್ನಮ್ಮ ಎಂಬ ಮಹಿಳೆಯ ದಾಳಿ ಮಾಡಿದ್ದ ಹುಲಿ ಆಕೆಯನ್ನು ಕೊಂದು ಹಾಕಿತ್ತು. ಮರು ದಿನ ಅದೇ ಗ್ರಾಮದ ಹಸುವೊಂದರ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು.

ಹುಲಿ ಒಮ್ಮೆ ಬೇಟೆ ಮಾಡಿದ ಸ್ಥಳಕ್ಕೆ ಬಂದೇ ಬರುತ್ತದೆ ಎಂಬುದರ ಮೇಲೆ ಹುಲಿ ದಾಳಿ ಮಾಡಿದ ಸ್ಥಳದಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಸೋಮವಾರ ರಾತ್ರಿ 9ರ ಸುಮಾರಿಗೆ ಹಸು ತಿನ್ನಲು ಬಂದಿರುವುದು ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅರಣ್ಯ ಇಲಾಖೆ ಸಮೀಪದಲ್ಲೇ ಬೋನು ಇರಿಸಿ ಅದರೊಳಗೆ ವೈದ್ಯಾಧಿಕಾರಿ ಡಾ.ವಾಸೀಂ ಜಾಫರ್‌ ಇದ್ದರು. ಸಿಬ್ಬಂದಿಯೂ ಹಲಿಗಾಗಿ ಕಾಯುತ್ತಿದ್ದರು. ಮಧ್ಯರಾತ್ರಿ ಹುಲಿ ಬಂದಿತು. ಅದಕ್ಕೆ ಅರವಳಿಕೆ ನೀಡಲು ವೈದ್ಯರು ಯಶಸ್ವಿಯಾದರು. ಕೆಲವೇ ಕ್ಷಣದಲ್ಲಿ ಮಂಪರಿನಿಂದ ಮಲಗಿದ ಹುಲಿಯನ್ನು ಬಲೆ ಹಾಕಿ ಸೆರೆ ಹಿಡಿದು ಬೆಳಗಿನ ಜಾವವೇ ಮೈಸೂರು ಮೃಗಾಲಯಕ್ಕೆ ತರಲಾಯಿತು.
ಹುಲಿ ಸೆರೆಗೆ 200 ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ, 100 ಮಂದಿ ಗಿರಿಜನರನ್ನು ನಿಯೋಜನೆ ಮಾಡಲಾಗಿತ್ತು. ಢ್ರೋಣ್‌ ಬಳಸಿ ಹುಲಿ ಜಾಡು ಪತ್ತೆಗೆ ಕ್ರಮ ಕೈಗೊಳ್ಳಲಾಗಿತ್ತು. ಮೂರು ಸಾಕಾನೆಗಳೂ ಸೆರೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement