ಮದುವೆಗೆ ಒಪ್ಪದ ಶಾಲಾ ಶಿಕ್ಷಕಿಯ ಅಪಹರಣ….

ಹಾಸನ: ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಶಾಲಾ ಶಿಕ್ಷಕಿಯನ್ನೇ ಅಪಹರಿಸಿರುವ ಘಟನೆ ಹಾಸನ ಜಿಲ್ಲೆಯ ಬಿಟ್ಟಗೌಡನಹಳ್ಳಿಯ ಬಳಿ ಇಂದು, ಗುರುವಾರ ಬೆಳಗ್ಗೆ ನಡೆದಿದೆ.
ಖಾಸಗಿ ಶಾಲೆಯಲ್ಲಿ ಶಿಕ್ಷಕಿ ಕೆಲಸ ಮಾಡುತ್ತಿದ್ದ ಅರ್ಪಿತಾ ಎಂಬವರನ್ನು ಶಾಲೆ ಮುಂಭಾಗದಿಂದಲೇ ಅಪಹರಿಸಲಾಗಿದೆ. ಶಿಕ್ಷಕಿ ಅರ್ಪಿತಾ ಗುರುವಾರ ಬೆಳಿಗ್ಗೆ ಶಾಲೆಗೆ ಹೊರಟಿದ್ದಾಗ, ಆಕೆಯ ಸಂಬಂಧಿ ರಾಮು ಎಂಬಾತ ಅಪಹರಣ ಮಾಡಿದ್ದಾನೆ ಎಂದು ಶಿಕ್ಷಕಿಯ ಪೋಷಕರು ಆರೋಪಿಸಿದ್ದಾರೆ.

15 ದಿನಗಳ ಹಿಂದೆ ರಾಮು ಮತ್ತು ಆತನ ಪೋಷಕರು ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಮನೆಗೆ ಬಂದಿದ್ದು, ಈ ವೇಳೆ ಮದುವೆಗೆ ಶಿಕ್ಷಕಿ ಅರ್ಪಿತಾ ಹಾಗೂ ಕುಟುಂಬದ ಸದಸ್ಯರು ಒಪ್ಪಿರಲಿಲ್ಲ ಎನ್ನಲಾಗಿದೆ. ಶಿಕ್ಷಕಿ ಮದುವೆಗೆ ಒಪ್ಪಿಲ್ಲವೆಂಬ ಕಾರಣಕ್ಕೆ ಆಕೆಯನ್ನು ಅಪಹರಣ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಗುರುವಾರ ಬೆಳಗ್ಗೆ ಸುಮಾರು 8 ಗಂಟೆಗೆ ಅರ್ಪಿತಾ ಶಾಲೆಗೆ ತೆರಳುತ್ತಿದ್ದರು. ಈ ವೇಳೆ, ಕಾರ್​ನಲ್ಲಿ ಬಂದು ಬಲವಂತವಾಗಿ ಶಿಕ್ಷಕಿಯನ್ನು ಎಳೆದುಕೊಂಡು ಹೋಗಿದ್ದಾರೆ. ಅರ್ಪಿತಾ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ ಹಾಗೂ ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ. ತಂಡಗಳನ್ನು ರಚಿಸಿದ್ದು, ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement