ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟ ಮಾಡಿದ್ದು, ಈ ವೇಳಾಪಟ್ಟಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 25 ರಿಂದ ಏಪ್ರಿಲ್‌ 6ರ ವರೆಗೆ ಹಾಗೂ ದ್ವಿತೀಯ ಪಿಯುಸಿ‌ ಪರೀಕ್ಷೆ ಮಾರ್ಚ್‌ 2‌ ರಿಂದ ಮಾರ್ಚ್ 22 ರವರೆಗೆ ನಡೆಯಲಿದೆ. ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಶುಕ್ರವಾರ ಪ್ರಕಟಿಸಲಾಗಿದ್ದು, ಈ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 15ರ ಒಳಗೆ ಅವಕಾಶ ನೀಡಲಾಗಿದೆ.
ಆಕ್ಷೇಪಣೆಗಳನ್ನು ಮಂಡಲಿಯ ಇ-ಮೇಲ್‌ ವಿಳಾಸ [email protected] ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸಬಹುದಾಗಿದೆ. (ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪಿಡಿಎಫ್‌ ನೋಡಲು   ಇಲ್ಲಿ  2nd-puc-and-sslc–time-table-0001   ಕ್ಲಿಕ್‌ ಮಾಡಬಹುದು)

ಎಸ್‍ಎಸ್‍ಎಲ್‍ಸಿ ವೇಳಾಪಟ್ಟಿ:
ಮಾರ್ಚ್ 25- ಪ್ರಥಮ ಭಾಷೆ (ಕನ್ನಡ)
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30- ವಿಜ್ಞಾನ
ಏಪ್ರಿಲ್ 2- ಗಣಿತ
ಏಪ್ರಿಲ್ 4- ತೃತೀಯ ಭಾಷೆ (ಹಿಂದಿ)
ಏಪ್ರಿಲ್ 6- ದ್ವೀತಿಯ ಭಾಷೆ (ಇಂಗ್ಲಿಷ್)

ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ದ್ವಿತೀಯ ಪಿಯುಸಿ ವೇಳಾಪಟ್ಟಿ:
ಮಾರ್ಚ್ 2- ಕನ್ನಡ, ಅರೇಬಿಕ್
ಮಾರ್ಚ್ 4- ಇತಿಹಾಸ, ಭೌತಶಾಸ್ತ್ರ
ಮಾರ್ಚ್ 5- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್
ಮಾರ್ಚ್ 6- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 7- ಹಿಂದಿ
ಮಾರ್ಚ್ 9- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 11- ಇಂಗ್ಲಿಷ್
ಮಾರ್ಚ್ 12- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 13- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 14- ಗಣಿತ, ಶಿಕ್ಷಣಶಾಸ್ತ್ರ
ಮಾರ್ಚ್ 16- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 18- ರಸಾಯನಶಾಸ್ತ್ರ, ಮನಃಶಾಸ್ತ್ರ,ಮೂಲಗಣಿತ, ಹಿಂದೂಸ್ಥಾನಿ ಸಂಗೀತ
ಮಾರ್ಚ್ 20- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 22- ಅರ್ಥಶಾಸ್ತ್ರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement